ಶನಿವಾರ, ಡಿಸೆಂಬರ್ 3, 2022
20 °C

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಸಂಬಂಧಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಕೃತ್ಯ ಎಸಗಿದ್ದ ಆರೋಪದಡಿ ಆಕೆಯ ಸಂಬಂಧಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಕಟ್ಟಡ ನಿರ್ಮಾಣ ಕಾರ್ಮಿಕರಾಗಿರುವ ತಂದೆ–ತಾಯಿ ಜೊತೆ ಬಾಲಕಿ ನೆಲೆಸಿದ್ದಳು. ಸಂಬಂಧಿಯೇ ಆಗಿರುವ ಆರೋಪಿ, ಬಾಲಕಿಯನ್ನು ಪುಸಲಾಯಿಸಿ ಹಲವು ಬಾರಿ ದೌರ್ಜನ್ಯ ಎಸಗಿರುವ ಆರೋಪವಿದೆ. ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಗಸ್ತು ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ: ‘ಸೋಮವಾರ ರಾತ್ರಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ ಆರೋಪಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅದೇ ನಿರ್ಜನ ಪ್ರದೇಶ ಸಮೀಪದ ರಸ್ತೆಯಲ್ಲಿ ಹೊರಟಿದ್ದ ಗಸ್ತು ಸಿಬ್ಬಂದಿ, ಇಬ್ಬರನ್ನೂ ಕಂಡು ಸ್ಥಳಕ್ಕೆ ಹೋಗಿ ವಿಚಾರಿಸಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಇಬ್ಬರೂ ಸಂಬಂಧಿಕರೆಂದು ಆರೋಪಿ ಹೇಳಿದ್ದ. ಆದರೆ, ಬಾಲಕಿಯನ್ನು ಮಾತನಾಡಿಸಿದಾಗ ಲೈಂಗಿಕ ದೌರ್ಜನ್ಯದ ವಿಷಯ ಗೊತ್ತಾಗಿತ್ತು. ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತರಲಾಯಿತು. ಬಾಲಕಿಯನ್ನು ರಕ್ಷಿಸಿ, ಪೋಷಕರಿಗೆ ಮಾಹಿತಿ ನೀಡಲಾಯಿತು. ಪೋಷಕರು ನೀಡುವ ದೂರು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು