ಶನಿವಾರ, ಜೂನ್ 6, 2020
27 °C

ಕಸ್ತೂರಿರಂಗನ್‌ ವರದಿ| ಏಕರೂಪದ ಅಧಿಸೂಚನೆ ಬೇಡ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಸ್ತೂರಿರಂಗನ್‌ ವರದಿಯ ಶಿಫಾರಸುಗಳ ಜಾರಿಗೆ ಸಂಬಂಧಿಸಿ ಕೇಂದ್ರ ಸರ್ಕಾರ ರೂಪಿಸಿರುವ ಕರಡು ಅಧಿಸಚನೆಯನ್ನು ಕರ್ನಾಟಕವೂ ಸೇರಿ ಹಲವು ರಾಜ್ಯಗಳು  ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಏಕರೂಪದ ಅಧಿಸೂಚನೆ ಹೊರಡಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ಪ್ರದೇಶವೆಂದು ಘೋಷಿಸುವ ಸಂಬಂಧ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಗುರುವಾರ ವಿಡಿಯೊ ಸಂವಾದ ನಡೆಸಿದರು.

‘ರಾಜ್ಯದಲ್ಲಿ ಗ್ರಾಮ ಪಂಚಾಯಿತಿಗಳು, ತಾಲ್ಲೂಕು ಪಂಚಾಯಿತಿಗಳು, ಜಿಲ್ಲಾ ಪಂಚಾಯಿತಿಗಳು, ವಿವಿಧ ಹಂತಗಳ ಜನಪ್ರತಿನಿಧಿಗಳು ಹಾಗೂ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಯನ್ನು ಈಗಿರುವ ಸ್ವರೂಪದಲ್ಲಿ ತಿರಸ್ಕರಿಸಿವೆ. ಅದರಲ್ಲೂ ಸೂಕ್ಷ್ಮ ಪರಿಸರ ಪ್ರದೇಶ ಎಂದು ಘೋಷಿಸಿದ್ದನ್ನು ತಿರಸ್ಕರಿಸಿದ್ದಾರೆ. ಇದಕ್ಕೆ ಸಾಕಷ್ಟು ವಿರೋಧ ಇದೆ’ ಎಂದು ಯಡಿಯೂರಪ್ಪ ತಿಳಿಸಿದರು.

ಪ್ರತಿ ರಾಜ್ಯದ ಸಮಸ್ಯೆಗಳು, ಸವಾಲುಗಳು ಭಿನ್ನವಾಗಿರುವುದರಿಂದ ಭಾರತ ಸರ್ಕಾರವು ಎಲ್ಲ ರಾಜ್ಯಗಳಿಗೆ ಏಕ ರೂಪದ ಅಧಿಸೂಚನೆ ಹೊರಡಿಸುವುದು ಸರಿಯಲ್ಲ ಎಂದೂ ಪ್ರತಿಪಾದಿಸಿದರು.

ಇದಕ್ಕೆ ಸಹಮತ ವ್ಯಕ್ತಪಡಿಸಿದ ಪ್ರಕಾಶ್ ಜಾವಡೇಕರ್ ಅವರು, ಪ್ರತಿ ರಾಜ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಪ್ರತ್ಯೇಕವಾಗಿ ಎಲ್ಲ ರಾಜ್ಯಗಳ ಜತೆ ಚರ್ಚಿಸುವುದಾಗಿ ಭರವಸೆ
ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು