ಶುಕ್ರವಾರ, ಸೆಪ್ಟೆಂಬರ್ 17, 2021
30 °C

ವೇದಾಂತು: ನಾಳೆ ದೀಪಿಕಾ ಪಡುಕೋಣೆ ಜತೆ ಸಂವಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆನ್‌ಲೈನ್‌ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವ ವೇದಾಂತು, ಮಾನಸಿಕ ಆರೋಗ್ಯ ಕಾಳಜಿ ಕುರಿತು ನಾಳೆ ಭಾನುವಾರ (ಜು. 12) ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಜತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದೆ.

ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಹಲವಾರು ವಿಷಯಗಳು ಈ ಆನ್‌ಲೈನ್‌ ಸಂವಾದ ಕಾರ್ಯಕ್ರಮದಲ್ಲಿ ಪ್ರಸ್ತಾಪವಾಗಲಿವೆ. ವಿದ್ಯಾರ್ಥಿಗಳು, ಪಾಲಕರು ಮತ್ತು ಶಿಕ್ಷಕರಿಗೆ ಉಪಯುಕ್ತವಾಗಿರಲಿದೆ. ‘ದಿ ಲಿವ್ ಲವ್‌ ಲಾಫ್‌ ಫೌಂಡೇಷನ್’ ಸ್ಥಾಪಕಿಯಾಗಿರುವ ದೀಪಿಕಾ ಅವರು ಕೋವಿಡ್‌ ಬಿಕ್ಕಟ್ಟಿನ ಸಂದರ್ಭ ಮತ್ತು ನಂತರದ ದಿನಗಳಲ್ಲಿನ ಒತ್ತಡ, ಖಿನ್ನತೆ, ಆತಂಕಗಳನ್ನು ಎದುರಿಸುವ   ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಲಿದ್ದಾರೆ. ಆಸಕ್ತರು  https://vdnt.in/MTDP ಅಂತರ್ಜಾಲ ತಾಣದಲ್ಲಿ ನೋಂದಾಯಿಸಿಕೊಳ್ಳಲು ವೇದಾಂತು ಸಿಇಒ ವಂಶಿ ಕೃಷ್ಣಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು