ಬೆಂಗಳೂರು: ಮಡಿವಾಳದ ಬಳಿಯ ಮಾರುತಿನಗರದ ಲಾಡ್ಜ್ವೊಂದರಲ್ಲಿ ವಾಸ್ತವ್ಯ ಮಾಡಿದ್ದ ತಮಿಳುನಾಡಿನ ವ್ಯಕ್ತಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುರುಗನ್ ಮಧು (35) ಮೃತಪಟ್ಟವರು. ಅವಿವಾಹಿತರಾಗಿದ್ದ ಮಧು ತಾಯಿಯೊಂದಿಗೆ ವಾಸವಾಗಿದ್ದರು. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಎರಡು ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು ಎಂದು ಪೊಲೀಸರು ಹೇಳಿದರು.

‘ಮೇ 18ರಂದು ನಗರಕ್ಕೆ ಬಂದಿದ್ದ ಮಧು, ಮಾರುತಿನಗರದ ಗೋಲ್ಡನ್ ನೆಕ್ಸ್ಟ್ ಲಾಡ್ಜ್ನಲ್ಲಿ ತಂಗಿದ್ದರು. ಎರಡು ದಿನವಾದರೂ ಅವರು ಕೊಠಡಿಯಿಂದ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ, ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದರು. ಕೊಠಡಿ ಬಾಗಿಲು ಒಡೆದು ಪರಿಶೀಲಿಸಿದಾಗ ಹಾಸಿಗೆಯ ಮೇಲೆ ಮೃತದೇಹ ಪತ್ತೆಯಾಯಿತು’ ಎಂದು ಪೊಲೀಸರು ಹೇಳಿದರು.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಮಧು ಅವರಿಗೆ ಈ ಹಿಂದೆ ಎರಡು ಬಾರಿ ಲಘು ಹೃದಯಾಘಾತವಾಗಿತ್ತು ಎಂದು ಗೊತ್ತಾಗಿದೆ. ಹೀಗಾಗಿ, ಅವರು ಹೃದಯಾಘಾತದಿಂದಲೇ ಮೃತಪಟ್ಟಿರುವ ಶಂಕೆ ಇದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ಗೊತ್ತಾಗಲಿದೆ. ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮಡಿವಾಳ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.