ಬೈಕ್‌ನಲ್ಲಿ ವೇಗವಾಗಿ ಬಂದ ನಲ್ಲೂರಹಳ್ಳಿಯ ನಿವಾಸಿ 19 ವರ್ಷದ ಯುವಕ, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆ ನೀರು ಪೂರೈಕೆ ಟ್ಯಾಂಕರ್ ವಾಹನದ ಚಕ್ರ ಹರಿದಿದೆ.
ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು. ಆದರೂ ಬದುಕಿ ಉಳಿಯಲಿಲ್ಲ. ಅಪಘಾತದ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೈಟ್ ಫೀಲ್ಡ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.