ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನೆ ಹಿಡಿಯಲು ಕಾರ್ಯಪಡೆ: ಸಿ.ಎಂ. ಸಭೆಯಲ್ಲಿ ತೀರ್ಮಾನ

ಸಿ.ಎಂ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ
Last Updated 21 ನವೆಂಬರ್ 2022, 16:30 IST
ಅಕ್ಷರ ಗಾತ್ರ

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕಾಗಿ ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ಆನೆ ಕಾರ್ಯಪಡೆಗಳನ್ನು ರಚಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆನೆಗಳು ಜನವಸತಿ ಪ್ರದೇಶಗಳಿಗೆ ಪ್ರವೇಶಿಸಿ ಹಾನಿ ಮಾಡುತ್ತಿರುವುದನ್ನು ನಿಯಂತ್ರಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ಆದೇಶ ಹೊರಡಿಸಲಾಗಿದೆ.

ಪ್ರತಿ ಕಾರ್ಯಪಡೆಯಲ್ಲಿ ತಲಾ ಒಬ್ಬಉಪ ಅರಣ್ಯ ಸಂರಕ್ಷಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ
ಅರಣ್ಯಾಧಿಕಾರಿ, ನಾಲ್ವರು ಉಪ ವಲಯಅರಣ್ಯಾಧಿಕಾರಿಗಳು, 8 ಮಂದಿ ಅರಣ್ಯರಕ್ಷಕರು ಹಾಗೂ 32 ಹೊರ ಗುತ್ತಿಗೆ ಸಿಬ್ಬಂದಿ ಇರಲಿದ್ದಾರೆ. ಪ್ರತಿ ಜಿಲ್ಲೆಯಕಾರ್ಯಪಡೆಗೆ ತಲಾ 3 ಬೊಲೆರೋ ಜೀಪ್‌ಹಾಗೂ ಬಾಡಿಗೆ ಆಧಾರದಲ್ಲಿ ಪಡೆದ ಎರಡು ಕ್ಯಾಂಟರ್‌ ವಾಹನಗಳನ್ನು ಒದಗಿಸುವಂತೆ ಆದೇಶಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಾರ್ಯಪಡೆಯು ಮೂಡಿಗೆರೆಯಲ್ಲಿ, ಹಾಸನ ಜಿಲ್ಲೆಯ ಕಾರ್ಯಪಡೆಯು ಸಕಲೇಶಪುರದಲ್ಲಿ, ಮೈಸೂರು ಜಿಲ್ಲೆಯ ಕಾರ್ಯಪಡೆಯು ಹುಣಸೂರಿನಲ್ಲಿ ಮತ್ತು ಕೊಡಗು ಜಿಲ್ಲೆಯ ಕಾರ್ಯಪಡೆಯು ಮಡಿಕೇರಿಯಲ್ಲಿ ಕೇಂದ್ರಸ್ಥಾನ ಹೊಂದಿರಲಿವೆ. ಕಾರ್ಯಪಡೆಗಳಿಗೆ ಅಗತ್ಯವಿರುವ ವಾಕಿಟಾಕಿ, ಬಂದೂಕು, ಪಟಾಕಿ ಮತ್ತಿತರ ಸಲಕರಣೆ ಒದಗಿಸುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

ಕಾರ್ಯಪಡೆಯ ತಂಡಗಳು ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ಗಸ್ತು ತಿರುಗಬೇಕು. ಜನವಸತಿ ಪ್ರದೇಶ, ಕೃಷಿ
ಜಮೀನು ಹಾಗೂ ಕಾಫಿ ಎಸ್ಟೇಟ್‌ಗಳಲ್ಲಿಆನೆಗಳ ಚಲನವಲನಗಳನ್ನು ಗುರುತಿಸಿ ಅರಣ್ಯಕ್ಕೆ ಹಿಮ್ಮೆಟ್ಟಿಸಲು ಕ್ರಮ ಕೈಗೊಳ್ಳ
ಬೇಕು. ಕಾಡಾನೆ ಹಾವಳಿ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT