ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಬಿಎಂಪಿ: ಶೇ 53ರಷ್ಟು ಆಸ್ತಿ ತೆರಿಗೆ ಸಂಗ್ರಹ

ತೆರಿಗೆ ಬಾಕಿ ವಸೂಲಿಗೆ ಕ್ರಮ ಕೈಗೊಳ್ಳಿ: ಮುಖ್ಯ ಆಯುಕ್ತ ಸೂಚನೆ
Last Updated 23 ಸೆಪ್ಟೆಂಬರ್ 2021, 20:37 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಬಿಬಿಎಂಪಿಯು ₹ 4 ಸಾವಿರ ಕೋಟಿಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಿದ್ದು, ಸೆ.22ರವರೆಗೆ ₹ 2,141.51 ಕೋಟಿ (ಶೇ 53.53ರಷ್ಟು) ತೆರಿಗೆ ಸಂಗ್ರಹವಾಗಿದೆ.

ತೆರಿಗೆಸಂಗ್ರಹಗುರಿತಲುಪಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕಂದಾಯ ವಿಭಾಗದ ಅಧಿಕಾರಿಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರು ಗುರುವಾರ ಸಭೆ ನಡೆಸಿದರು.

‘ಅನೇಕ ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ವಲಯವಾರು ಪಟ್ಟಿ ತಯಾರಿಸಬೇಕು. ಕಂದಾಯ ಅಧಿಕಾರಿಗಳು ಹಾಗೂ ಸಹಾಯಕ ಕಂದಾಯ ಅಧಿಕಾರಿಗಳು ಎಲ್ಲಾ ಸುಸ್ತಿದಾರರಿಗೆ ನೋಟಿಸ್ ಜಾರಿಗೊಳಿಸಿ ವಾರ್ಡ್ ವ್ಯಾಪ್ತಿಯಲ್ಲಿ ತ್ವರಿತಗತಿಯಲ್ಲಿ ತೆರಿಗೆ ಸಂಗ್ರಹಿಸಲು ಕ್ರಮ ಕೈಗೊಳ್ಳಬೇಕು’ ಎಂದು ಮುಖ್ಯ ಆಯುಕ್ತರು ಸೂಚಿಸಿದರು.

ಸಭೆಯಲ್ಲಿ ವಿಶೇಷ ಆಯುಕ್ತರ (ಕಂದಾಯ) ಎಸ್. ಬಸವರಾಜು, ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರುಗಳು, ಕಂದಾಯ ವಿಭಾಗದ ಉಪ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು, ಎಲ್ಲಾ ಕಂದಾಯ ಅಧಿಕಾರಿಗಳು, ಸಹಾಯಕ ಕಂದಾಯ ಅಧಿಕಾರಿಗಳು ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT