ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ತೆರಿಗೆ ಬಾಕಿ: ಮಂತ್ರಿ ಮಾಲ್‌ಗೆ ಬೀಗ

Published 16 ಮಾರ್ಚ್ 2024, 16:34 IST
Last Updated 16 ಮಾರ್ಚ್ 2024, 16:34 IST
ಅಕ್ಷರ ಗಾತ್ರ

ಬೆಂಗಳೂರು: ಆಸ್ತಿ ತೆರಿಗೆ ಪಾವತಿ ಮಾಡದ ಮಂತ್ರಿ ಮಾಲ್‌ಗೆ ಬಿಬಿಎಂಪಿ ಅಧಿಕಾರಿಗಳು ಶನಿವಾರ ಬೀಗ ಹಾಕಿದರು.

ಬಿಬಿಎಂಪಿಗೆ ಐದು ವರ್ಷಗಳಿಂದ ₹ 40 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟರ್ಫ್‌ ಕ್ಲಬ್‌: ₹ 5.15 ಕೋಟಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರು ಟರ್ಫ್‌ ಕ್ಲಬ್‌ಗೂ ಬೀಗ ಹಾಕಲು ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸಿದರು. ಹೈಕೋರ್ಟ್‌ನಿಂದ ತಂದಿರುವ ಮಧ್ಯಂತರ ತಡೆಯಾಜ್ಞೆಯನ್ನು ಟರ್ಫ್‌ ಕ್ಲಬ್‌ನವರು ತೋರಿಸಿದ್ದರಿಂದ ಬಿಬಿಎಂಪಿ ಅಧಿಕಾರಿಗಳು ವಾಪಸ್‌ ಆದರು.

ಫೆಬ್ರುವರಿಯಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಟರ್ಪ್‌ ಕ್ಲಬ್‌ ಅಧ್ಯಕ್ಷ ಅರವಿಂದ್‌ ರಾಘವನ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT