ಬುಧವಾರ, ಮಾರ್ಚ್ 29, 2023
27 °C

ತೆರಿಗೆ ವಂಚನೆ ಆರೋಪ: ಬೆಂಗಳೂರಿನ ಚಿನ್ನಾಭರಣ ಮಳಿಗೆಗಳಲ್ಲಿ ಐ.ಟಿ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತೆರಿಗೆ ವಂಚನೆ ಮತ್ತು ವಹಿವಾಟಿನ ನೈಜ ಮಾಹಿತಿ ಮುಚ್ಚಿಟ್ಟಿರುವ ಆರೋಪದ ಮೇಲೆ ನಗರದ ಹಲವೆಡೆ ಚಿನ್ನಾಭರಣ ಮಳಿಗೆಗಳ ಮೇಲೆ ಮಂಗಳವಾರ ದಾಳಿ ಮಾಡಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಹಲವು ಪ್ರಮುಖ ಬ್ರ್ಯಾಂಡ್‌ನ ಚಿನ್ನಾಭರಣ ಮಳಿಗೆಗಳಲ್ಲಿ ಶೋಧ ನಡೆಯುತ್ತಿದೆ. ಚಿಕ್ಕಪೇಟೆ, ಜಯನಗರ, ಬಸವನಗುಡಿ, ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ 25ಕ್ಕೂ ಹೆಚ್ಚು ಮಳಿಗೆಗಳಲ್ಲಿ ಶೋಧ ನಡೆಸಲಾಗುತ್ತಿದೆ.

ಪೊಲೀಸ್‌ ಭದ್ರತೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎಲ್ಲ ಮಳಿಗೆಗಳ ಪ್ರವೇಶ ದ್ವಾರಗಳನ್ನು ಮುಚ್ಚಿ, ಲೆಕ್ಕಪತ್ರ, ಬ್ಯಾಂಕ್‌ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು