ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಉದ್ಯಮಗಳಿಗೆ ಆಸ್ತಿ ತೆರಿಗೆ: ಸಂಪುಟ ಸಭೆ ಒಪ್ಪಿಗೆ
ಬೆಂಗಳೂರು: ಕೆಐಎಡಿಬಿ ಮತ್ತು ಕೆಎಸ್ಎಸ್ಐಡಿಸಿ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿಗೊಳಿಸಿ ಹಂಚಿಕೆ ಮಾಡುವ ಕೈಗಾರಿಕಾ ನಿವೇಶನಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ವಿಧಿಸಲು ಅವಕಾಶ ಕಲ್ಪಿಸಲು ಈಗ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕೈಗಾರಿಕೆ
ಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ದರವನ್ನು ನಿಗದಿ
ಮಾಡಲು ಅನುಕೂಲವಾಗುವಂತೆ 1964ರ ಕರ್ನಾಟಕ ಪೌರಸಭೆಗಳ ಕಾಯ್ದೆಯ ಕಲಂ 94 ಮತ್ತು 1976ರ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆಯ ಕಲಂ 108ಕ್ಕೆ ತಿದ್ದುಪಡಿ ಮಾಡಲಾಗಿದೆ.ಇದರಿಂದಾಗಿ, ವಾಣಿಜ್ಯ ಕಟ್ಟಡಗಳ ಮೂಲ ದರ ಶೇ 0.5 ಕ್ಕಿಂತ ಕಡಿಮೆ ಇರುವಂತೆ, ಶೇ 3 ಕ್ಕಿಂತ ಹೆಚ್ಚಿಲ್ಲದಂತೆ ವಾಣಿಜ್ಯೇತರ ಕಟ್ಟಡಗಳಿಗೆ ಕಟ್ಟಡದ ಮೂಲ ದರ ಶೇ 0.02 ಕ್ಕಿಂತ ಕಡಿಮೆ ಇಲ್ಲದಂತೆ ಹಾಗೂ ಶೇ 1.5 ಕ್ಕಿಂತ ಹೆಚ್ಚಿಲ್ಲದಂತೆ ನಿಗದಿ ಮಾಡಲಾಗಿದೆ. ಖಾಲಿ ಭೂಮಿಗೆ ಮೂಲ ಬೆಲೆಯ ಶೇ 0.2 ಕ್ಕಿಂತ ಕಡಿಮೆ ಇಲ್ಲದಂತೆ ಹಾಗೂ ಶೇ 0.5 ಕ್ಕಿಂತ ಹೆಚ್ಚಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯನ್ನು ನಿಗದಿಪಡಿಸಲು ಅವಕಾಶ ನೀಡಲಾಗಿದೆ.
ಕೈಗಾರಿಕಾ ಆಸ್ತಿ ತೆರಿಗೆಯನ್ನು ವಾಣಿಜ್ಯ ಕಟ್ಟಡಗಳಿಗಿಂತ ಕಡಿಮೆ ವಿಧಿಸಿದರೆ ನಗರ ಸ್ಥಳೀಯ ಸಂಸ್ಥೆಗಳಿಗೆ ಹೊರೆ
ಯಾದರೂ ಹೆಚ್ಚಿನ ಆಸ್ತಿ ತೆರಿಗೆ ಸಂಗ್ರಹವಾಗುವುದರಿಂದ ಆರ್ಥಿಕ ಸ್ಥಿತಿ ಸುಧಾರಿಸುವ ನಿರೀಕ್ಷೆಯಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.