ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಯರೋಗದಿಂದ ಮುಕ್ತ–ಎಲ್ಲರ ಸಹಕಾರ ಅಗತ್ಯ:

Last Updated 6 ಏಪ್ರಿಲ್ 2021, 21:31 IST
ಅಕ್ಷರ ಗಾತ್ರ

ಬೆಂಗಳೂರು:‘ಕೇಂದ್ರ ಆರೋಗ್ಯ ಇಲಾಖೆಯು 2025ರೊಳಗೆ ದೇಶವನ್ನು ಕ್ಷಯರೋಗ ಮುಕ್ತ ಮಾಡುವ ಗುರಿ ಇಟ್ಟುಕೊಂಡಿದೆ. ಎಲ್ಲರೂ ಈ ಕಾರ್ಯಕ್ಕೆ ಕೈಜೋಡಿಸಿದರೆ ಯಶಸ್ಸು ಸಾಧ್ಯ’ ಎಂದುಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಅಧ್ಯಕ್ಷಮರಿಸ್ವಾಮಿ ತಿಳಿಸಿದರು.

ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಚುನಾಯಿತ ಪ್ರತಿನಿಧಿಗಳಿಗೆ ಬನಶಂಕರಿಯಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದಕ್ಷಯರೋಗ ಹಾಗೂ ಕೋವಿಡ್ ಕುರಿತು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಕೇಂದ್ರವು ಕ್ಷಯ ನಿರ್ಮೂಲನಾ ಕಾರ್ಯಕ್ರಮ ರೂಪಿಸಿ, ರಾಜ್ಯ ಆರೋಗ್ಯ ಇಲಾಖೆ ಮೂಲಕ ಜಿಲ್ಲಾ ಮಟ್ಟದಲ್ಲಿ ಕ್ಷಯ ನಿರ್ಮೂಲನೆಗೆ ನಿರ್ದೇಶಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ, ಬೆಂಗಳೂರು ಜಿಲ್ಲೆಯಲ್ಲಿ ಹೆಚ್ಚು ಜನಸಾಂದ್ರತೆ ಇದೆ. ಗಡಿಭಾಗ ಆಗಿರುವುದರಿಂದ ವಲಸಿಗರೂ ಹೆಚ್ಚು. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದರೆ,ಕ್ಷಯ ನಿರ್ಮೂಲನೆ ಸಾಧ್ಯ’ ಎಂದರು.

‘ಶಿಕ್ಷಣ ಸಂಸ್ಥೆಗಳು ಹಾಗೂ ಆರೋಗ್ಯ ಇಲಾಖೆ ಕಾರ್ಯಕರ್ತರ ನೆರವಿನಿಂದಜಿಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿಕ್ಷಯ ರೋಗ ಕುರಿತು ಅರಿವು ಮೂಡಿಸಲಾಗುತ್ತಿದೆ. ಇದಕ್ಕೆ ಚುನಾಯಿತ ಪ್ರತಿನಿಧಿಗಳು ಸಹಕಾರ ನೀಡಿ, ಜನಸಾಮಾನ್ಯರಿಗೆ ನೆರವಾಗಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT