ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಡಿಆರ್‌: ವಿವರ ಸಲ್ಲಿಕೆಗೆ ಎಸಿಬಿಗೆ ನಿರ್ದೇಶನ

Last Updated 24 ಜುಲೈ 2019, 19:29 IST
ಅಕ್ಷರ ಗಾತ್ರ

ಬೆಂಗಳೂರು: ‘ಬಹುಕೋಟಿ ವಂಚನೆಯ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಪ್ರಕರಣದಲ್ಲಿ ಈತನಕದ ತನಿಖೆಯ ವಿವರ ಸಲ್ಲಿಸಿ’ ಎಂದು ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ನಾಕೋಡ ಕನ್‌ಸ್ಟ್ರಕ್ಷನ್ ಲಿಮಿಟೆಡ್‌ ಕಂಪನಿಯ ನಿರ್ದೇಶಕ ರತನ್ ಬಾಬೂಲಾಲ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಎನ್. ಸತ್ಯನಾರಾಯಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಹಾಜರಿದ್ದ ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್ ಮತ್ತು ಎಸಿಬಿ ಐಜಿಪಿ ಹೇಮಂತ್‌ ನಿಂಬಾಳ್ಕರ್‌ ಅವರನ್ನು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.

‘ಈ ಹಗರಣದ ವ್ಯಾಪ್ತಿ ಎಷ್ಟಿದೆ, ಎಷ್ಟು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, ತನಿಖೆ ಯಾವ ಹಂತದಲ್ಲಿದೆ ಎಂಬ ವಿವರಗಳನ್ನು ಎರಡು ದಿನಗಳ ಒಳಗಾಗಿ ಸಲ್ಲಿಸಿ. ನಾಕೋಡ ಕನ್‌ಸ್ಟ್ರಕ್ಷನ್ ಲಿಮಿಟೆಡ್‌ ಕಂಪನಿಯ ವಿರುದ್ಧ ದೂರು ನೀಡಿದ್ದ ಸೈಯದ್ ಅಸ್ಲಾಂ ಪರ್ವೇಜ್ ಹಾಗೂ ಈ ಹಗರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ವಿವರ ನೀಡಿ’ ಎಂದು ನ್ಯಾಯಪೀಠ ತಾಕೀತು ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT