ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್.ಕೃಷ್ಣಲಾಲ್‌ ಜಾಮೀನು ನಿರಾಕರಣೆ

Last Updated 24 ಜೂನ್ 2019, 19:54 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿ ಮಹದೇವಪುರ ವಲಯ ಕಚೇರಿಯಲ್ಲಿ ಅಭಿವೃದ್ಧಿ ಹಕ್ಕು ವರ್ಗಾವಣೆಗೆ (ಟಿಡಿಆರ್) ಸಂಬಂಧಿಸಿದ ಕೆಲವು ಕಡತಗಳು ನಾಪತ್ತೆಯಾದ ಪ್ರಕರಣದ ಆರೋಪಿ ಎಸ್‌. ಕೃಷ್ಣಲಾಲ್‌ (ಮಹದೇವಪುರ ವಲಯ ಕಚೇರಿಯಲ್ಲಿ ಸಹಾಯಕ ಎಂಜಿನಿಯರ್‌ ಆಗಿದ್ದರು. ಸದ್ಯ ಬಿಡಿಎ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌) ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಹೈಕೋರ್ಟ್‌ ನಿರಾಕರಿಸಿದೆ.

ಈ ಕುರಿತಂತೆ ಕೃಷ್ಣಲಾಲ್‌ ಸಲ್ಲಿಸಿದ್ದ ಅರ್ಜಿಯ ಮೇಲಿನ ಕಾಯ್ದಿರಿಸಿದ್ದ ಆದೇ ಶವನ್ನು ನ್ಯಾಯಮೂರ್ತಿ ಎಸ್‌.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ಪ್ರಕಟಿಸಿದೆ.

‘ಇದೊಂದು ಗಂಭೀರ ಪ್ರಕರಣವಾಗಿದ್ದು, ಆರೋಪಿಯು ಮಧ್ಯಂತರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಆದ್ದರಿಂದ ಈ ಪ್ರಕರ ಣದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆ ಸುವ ಅಗತ್ಯವಿದೆ ಎಂಬ ಎಸಿಬಿ ವಾದ ಪುರಸ್ಕರಿಸಲು ಯೋಗ್ಯವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT