ಕೆ.ಆರ್.ಪುರ: ಮಕ್ಕಳಿಗೆ ಶಾಲಾ ಹಂತದಲ್ಲಿಯೇ ರಸ್ತೆ ಸುರಕ್ಷತೆ ಬಗ್ಗೆ ತಿಳಿಸುವ ಅಗತ್ಯವಿದೆ ಎಂದು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ಗೋವಿಂದಪ್ಪ ಹೇಳಿದರು.

ಕೆ.ಆರ್.ಪುರ ಸಮೀಪದ ಏಕತಾನಗರದ ಎಸ್.ಇ.ಎ ಶಾಲೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತೆ ಮಾಸಾಚರಣೆ –2025 ಉದ್ಘಾಟಿಸಿ ಮಾತನಾಡಿದರು.

ಶಾಲಾ ವಾಹನ ನಿರ್ವಹಣೆಯನ್ನು ಕಾಲಕಾಲಕ್ಕೆ ತಪ್ಪದೇ ನವೀಕರಿಸಿಕೊಂಡು ಮಕ್ಕಳ ಸುರಕ್ಷತೆಯನ್ನು ಕಾಪಾಡುವುದು ಎಲ್ಲಾ ಶಾಲಾ ಆಡಳಿತ ಮಂಡಳಿರವರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಉಮೇಶ್.ಪಿ ಮಾತನಾಡಿ, ರಸ್ತೆಯಲ್ಲಿ ಸಂಚರಿಸುವ ಪ್ರತಿಯೊಬ್ಬರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುವಾಗ ಸುರಕ್ಷತೆ ಮುಖ್ಯ ಎಂದರು.

ಈ ಸಂದರ್ಭದಲ್ಲಿ ಆರ್.ಟಿ.ಒ ಸೂಪರಿಡೆಂಟ್ ದೊಡ್ಡಲಿಂಗಯ್ಯ, ನಿವೃತ್ತ ಡಿ.ಡಿ.ಪಿ.ಐ, ವೆಂಕಟರಾಮರೆಡ್ಡಿ, ಕ್ಷೇತ್ರ ಸಮನ್ವಯಾಧಿಕಾರಿಗಳಾದ ಪ್ರಿಯದರ್ಶಿನಿ ಬಿ.ಎನ್, ಉಮೇಶ್ ಕೆ.ಹೆಚ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.