ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಶಿಕ್ಷಕಿ ಸಾವು: ₹50 ಲಕ್ಷ ಪರಿಹಾರಕ್ಕೆ ಒತ್ತಾಯ

Last Updated 25 ಜುಲೈ 2020, 19:33 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೋವಿಡ್‌–19 ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಅವರಿಗೆ ಸರ್ಕಾರ ₹50 ಲಕ್ಷ ಪರಿಹಾರ ಘೋಷಿಸಬೇಕು ಎಂದು ಶಿಕ್ಷಕ ಸಮುದಾಯ ಒತ್ತಾಯಿಸಿದೆ.

ದೇವರ ಜೀವನಹಳ್ಳಿಯಲ್ಲಿ ಸರ್ಕಾರಿ ಉರ್ದು ಮಾದರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ದಿಲ್‌ನಾಜ್‌ ಬೇಗಂ ಅವರನ್ನು ಕೋವಿಡ್‌–19 ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಜ್ವರ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗೆ ದಾಖಲಾಗುವ ಸಲುವಾಗಿ ಅವರು ಮೂರು ದಿನಗಳು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಎಲ್ಲಿಯೂ ಅವರನ್ನು ದಾಖಲಿಸಿಕೊಂಡಿರಲಿಲ್ಲ. ಬಳಿಕ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಸಾವಿಗೀಡಾದರು.

‘ಸರ್ಕಾರಿ ನೌಕರರು ಕೋವಿಡ್‌ ಕರ್ತವ್ಯದ ಮೇಲಿದ್ದಾಗ ನಿಧನ ಹೊಂದಿದರೆ ₹50 ಲಕ್ಷ ವಿಮಾ ಸೌಲಭ್ಯ ನೀಡಲಾಗುತ್ತಿದೆ. ಬೇಗಂ ಕುಟುಂಬದವರಿಗೂ ಸರ್ಕಾರ ಈ ಸೌಲಭ್ಯವನ್ನು ಒದಗಿಸಬೇಕು. ಕುಟುಂಬದವರಿಗೆ ತಕ್ಷಣ ಪರಿಹಾರ ನೀಡಬೇಕು’ ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ. ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT