ಶನಿವಾರ, ಆಗಸ್ಟ್ 13, 2022
26 °C

ಬೈಕಿಗೆ ಟ್ಯಾಂಕರ್ ಡಿಕ್ಕಿ: ಶಿಕ್ಷಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಇಲ್ಲಿನ ಕೊಲ್ಲಾಪುರ ಸರ್ಕಲ್ ಸಮೀಪ ಶನಿವಾರ ಬೈಕಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಶಿಕ್ಷಕಿಯೊಬ್ಬರು ಸಾವನ್ನಪ್ಪಿದ್ದಾರೆ.

ನಗರದ ಖಾಸಗಿ ಶಾಲೆಯೊಂದರ  ಶಿಕ್ಷಕಿ ರೇಣುಲಾ ಭಾತಕಾಂಡೆ (30)‌ ಮೃತಪಟ್ಟವರು. ತಮ್ಮ ಬೈಕಿನಲ್ಲಿ ಚನ್ನಮ್ಮ ವೃತ್ತದ ಕಡೆ ಹೋಗುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಶನಿವಾರ ರಾತ್ರಿ  ಸಾವನ್ನಪ್ಪಿದರು.

ಅವರಿಗೆ ಇಬ್ಬರು ಮಕ್ಕಳಿದ್ದು, ಕಳೆದ ಕೆಲವು ತಿಂಗಳ ಹಿಂದಷ್ಟೇ ಪತಿಯನ್ನು ಕಳೆದುಕೊಂಡಿದ್ದರು. ಈಗ ಶಿಕ್ಷಕಿ ಕೂಡ ಸಾವನ್ನಪ್ಪಿದ್ದರಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ.

 ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು