‘ಮೌಲ್ಯಾಧಾರಿತ ಶಿಕ್ಷಣ ಇಂದಿನ ಅಗತ್ಯ’

7

‘ಮೌಲ್ಯಾಧಾರಿತ ಶಿಕ್ಷಣ ಇಂದಿನ ಅಗತ್ಯ’

Published:
Updated:
Deccan Herald

ಹೊಸಕೋಟೆ: ಸಮಾಜದಲ್ಲಿ ಶಿಕ್ಷಕರಿಗೆ ಬಹುದೊಡ್ಡ ಗೌರವ ಇದ್ದು ಅದರ ಪಾವಿತ್ರ್ಯವನ್ನು ಕಾಪಾಡಿಕೊಂಡು ಹೋಗಬೇಕಾದ ಹೊಣೆ ಅವರ ಮೇಲಿದೆ ಎಂದು ಶಿವಗಂಗೆಯ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಹೊಸಕೋಟೆಯಲ್ಲಿ ಬುಧವಾರ ಆಯೋಜಿಸಿದ್ದ ತಾಲ್ಲೂಕುಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಕರು ತಮ್ಮ ಜ್ಞಾನಾರ್ಜನೆ ಹೆಚ್ಚಿಸಿಕೊಂಡು ಉತ್ತಮ ಶಿಕ್ಷಕರಾಗುವಲ್ಲಿ ತಮ್ಮ ವೃತ್ತಿ ಜೀವನದುದ್ದಕ್ಕೂ ಅಧ್ಯಯನಶೀಲರಾಗಬೇಕು. ಜತೆಗೆ ಮಕ್ಕಳನ್ನು ಉತ್ತಮ ಪ್ರಜೆ
ಗಳನ್ನಾಗಿ ರೂಪಿಸುವಲ್ಲಿ ಅವರಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ಕೊಡುವಲ್ಲಿ ಮುಂದಾಗಬೇಕು’ ಎಂದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಎನ್.ನಾಗರಾಜು ಮಾತನಾಡಿ, ‘ದಾನಿಗಳ ಮತ್ತು ಉದ್ಯಮಿಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿ ತಾಲ್ಲೂಕಿನಲ್ಲಿ ಶಾಲಾ– ಕಾಲೇಜುಗಳಿಗೆ ₹ 4.50 ಕೋಟಿ ವೆಚ್ಚದಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ’ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್.ಕನ್ನಯ್ಯ ಇದ್ದರು. 21 ಜನ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !