ಬೆಂಗಳೂರು: ಅನುದಾನಿತ ಶಾಲಾ ಕಾಲೇಜುಗಳ ಕಾಲ್ಪನಿಕ ವೇತನ ಸಮಸ್ಯೆಯನ್ನು ಶೀಘ್ರ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದೆ.
ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ಅವರು ಈ ಕುರಿತು ಹೇಳಿಕೆ ನೀಡಿದ್ದು, ಬಸವರಾಜ ಹೊರಟ್ಟಿಯವರ ವರದಿಯನ್ನು ಸರ್ಕಾರ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.