ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ಪ್ರತಿಭಟನೆಗಳಿಂದ ಅಭಿವೃದ್ಧಿ ಅಸಾಧ್ಯ

ವಿಚಾರಸಂಕಿರಣದಲ್ಲಿ ಸಚಿವ ಎಸ್.ಸುರೇಶ್‌ ಕುಮಾರ್‌ ಅಭಿಪ್ರಾಯ
Last Updated 6 ಅಕ್ಟೋಬರ್ 2019, 18:34 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿಕ್ಷಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೀದಿಗಿಳಿದು ಧರಣಿ ಹಾಗೂ ಪ್ರತಿಭಟನೆ ಮಾಡುವ ಸ್ಥಿತಿ ಎದುರಾದರೆ, ಅಂತಹ ದೇಶ ಅಥವಾ ರಾಜ್ಯ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ’ ಎಂದುಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ತಿಳಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘವು ನಗರದಲ್ಲಿ ಆಯೋಜಿಸಿದ್ದ ‘ಪ್ರಾಥಮಿಕ ಶಾಲಾ ಶಿಕ್ಷಕರ ಹೊಸ ವೃಂದ ಹಾಗೂ ವೃಂದ ಬಲ ನಿಗದಿ’ ಹಾಗೂ ‘ವೃಂದ ಮತ್ತು ನೇಮಕಾತಿ ನಿಯಮಗಳು 2017’ ಕುರಿತ ರಾಜ್ಯಮಟ್ಟದ ವಿಚಾರಸಂಕಿರಣದಲ್ಲಿ ಮಾತನಾಡಿದರು.

‘ಪದವೀಧರ ಶಿಕ್ಷಕರ ಬೇಡಿಕೆಗಳು ನ್ಯಾಯಯುತವಾಗಿವೆ. ಈ ಬಗ್ಗೆ ಚರ್ಚಿಸಲು ಅಕ್ಟೋಬರ್ 14ರ ನಂತರ ಸರಕಾರಿ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಪದಾಧಿಕಾರಿಗಳಸಭೆ ಕರೆಯಲಾಗುವುದು. ವಿದ್ಯಾರ್ಥಿಗಳಿಗೆಹಾಗೂ ಶಿಕ್ಷಕರಿಗೆ ಸಮತೋಲನವಾಗುವಂತೆ ನಿರ್ಧಾರ ಕೈಗೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಸ್.ವೈ.ಸೊರಟಿ, ‘ಶಿಕ್ಷಕರಿಗೆ ಮಾರಕವಾಗುವಂತೆ ರಾಜ್ಯ ಸರ್ಕಾರ 2017ರಲ್ಲಿ ಹೊಸ ವೃಂದ ಮತ್ತು ವೃಂದಬಲ ನಿಗದಿಯ ಆದೇಶ ಹೊರಡಿಸಿತು. ಇದರ ತಿದ್ದುಪಡಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ, ಸರ್ಕಾರ ಸ್ಪಂದಿಸಿಲ್ಲ’ ಎಂದರು.

ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ,‘ ರಾಜ್ಯದಲ್ಲಿ ಪದವೀಧರ ಶಿಕ್ಷಕರನ್ನು ಪ್ರಾಥಮಿಕ ಹಂತದಲ್ಲಿ ನೇಮಕ ಮಾಡಲಾಗುತ್ತಿದೆ. ದೇಶದಲ್ಲಿ ಜಾರಿಯಲ್ಲಿರುವ ಮೂರು ವಿಧದ ಶಿಕ್ಷಣ ನಿಯಮಗಳ ಪ್ರಕಾರ ಶಿಕ್ಷಕರ ನೇಮಕಾತಿ, ಮುಂಬಡ್ತಿ ಪ್ರಕ್ರಿಯೆಅರ್ಹತೆಗೆ ಅನುಗುಣವಾಗಿ ನಡೆಯಬೇಕು. ಶಿಕ್ಷಕರ ನೇಮಕಾತಿ ಹಾಗೂ ಮುಂಬಡ್ತಿ ಪ್ರಕ್ರಿಯೆ ಕಾನೂನುಬದ್ಧವಾಗಿಲ್ಲ. ಹೀಗಾಗಿ, ಬಡ್ತಿ ವೇಳೆಯೇ ಶೇ 75ರಷ್ಟು ಶಿಕ್ಷಕರಿಗೆ ಮುಂಬಡ್ತಿ ನೀಡಬೇಕು. ಉಳಿದ ಶೇ 25 ಭಾಗ ನೇಮಕ ಮಾಡಿಕೊಳ್ಳಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT