ಶಿಕ್ಷಕರ ವರ್ಗಾವಣೆಗೆ ಹಸಿರು ನಿಶಾನೆ

7

ಶಿಕ್ಷಕರ ವರ್ಗಾವಣೆಗೆ ಹಸಿರು ನಿಶಾನೆ

Published:
Updated:

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪಟ್ಟಿ ಪ್ರಕಟಿಸಲು ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಸಿರು ನಿಶಾನೆ ತೋರಿದ್ದಾರೆ. 

ಉಪಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿ ಇರುವಾಗ, ವರ್ಗಾವಣೆ ಮತ್ತು ನೇಮಕಾತಿ ಪ್ರಕ್ರಿಯೆ ಮುಂದುವರಿಸಬಹುದೇ ಎಂದು ಶಿಕ್ಷಣ ಇಲಾಖೆಯ ಆಯುಕ್ತರು ಚುನಾವಣಾಧಿಕಾರಿಗೆ ಪತ್ರ ಬರೆದು ಸ್ಪಷ್ಟಣೆ ಕೋರಿದ್ದರು. ವೇಳಾಪಟ್ಟಿಯಂತೆ ವರ್ಗಾವಣೆ ಪ್ರಕ್ರಿಯೆ ನಡೆಸಬಹುದು. ಆದರೆ, ಚುನಾವಣಾ ಪ್ರಕ್ರಿಯೆ ಮುಗಿಯುವ ವರೆಗೂ ವರ್ಗಾವಣೆಗೊಂಡ ಶಿಕ್ಷಕರನ್ನು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಶಾಲೆಗಳಿಂದ ಬಿಡುಗಡೆ ಮಾಡಬಾರದು ಎಂದು ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬಹುದು. ಆಯ್ಕೆಯಾದ ಶಿಕ್ಷಕರಿಗೆ ಚುನಾವಣಾ ಪ್ರಕ್ರಿಯೆ ಮುಗಿದ ಬಳಿಕವೇ ನೇಮಕಾತಿ ಪತ್ರ ನೀಡಲು ಅವಕಾಶ ನೀಡಿದ್ದಾರೆ.  

ವರ್ಗಾವಣೆಗಾಗಿ ಪ್ರತಿಭಟನೆ: ‘ಉಪ ಚುನಾವಣೆಯನ್ನು ನೆಪ ಮಾಡಿಕೊಂಡು ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಮುಂದೂಡಬಾರದು. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಪ್ರಕ್ರಿಯೆ ನಡೆಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣಾ ಹೋರಾಟ ಸಮಿತಿ ಮತ್ತು ವರ್ಗಾವಣೆ ವೇದಿಕೆಯಲ್ಲಿನ ನೂರಾರು ಶಿಕ್ಷಕರು, ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಮುಂದೆ ಬುಧವಾರ ಸಂಜೆವರೆಗೂ ಮೌನ ಪ್ರತಿಭಟನೆ ಮಾಡಿದರು. 

ಸಂಘದಿಂದ ಮನವಿ: ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯನ್ನು ಮುಂದುವರಿಸಲು ಅನುಮತಿ ನೀಡುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಅವರಿಗೆ ಬುಧವಾರ ಬೆಳಿಗ್ಗೆ ಮನವಿ ಸಲ್ಲಿಸಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !