ಮಂಗಳವಾರ, ಸೆಪ್ಟೆಂಬರ್ 22, 2020
20 °C

ಶಿಕ್ಷಕರ ವರ್ಗಾವಣೆ: ಗೊಂದಲ ಬಗೆಹರಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಿಕ್ಷಕರ ವರ್ಗಾವಣೆಯಲ್ಲಿ ಅನಾರೋಗ್ಯ ಪೀಡಿತರು, ಅಂಗವಿಕಲರು, ಸೈನಿಕರ ಪತ್ನಿ ಸಹಿತ ವಿಶೇಷ ಪ್ರಕರಣಗಳಿಗೆ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ.

ಪ್ರತಿ ವರ್ಷ ವಿಶೇಷ ಪ್ರಕರಣಗಳನ್ನು ವರ್ಗಾವಣೆ ಮಿತಿಯಿಂದ ಹೊರಗಡೆ ಇಟ್ಟೇ ವರ್ಗಾವಣೆ ಪ್ರಕರಣಗಳನ್ನು ನಡೆಸಲಾಗುತ್ತಿತ್ತು. ಆದರೆ ಈ ವರ್ಷ ಅವರೆಲ್ಲರನ್ನೂ ವರ್ಗಾವಣೆ ಮಿತಿಯೊಳಗೆ ತಂದಿರುವುದು ತಪ್ಪು.

ಹಿಂದಿ ಶಿಕ್ಷಕರ ಹುದ್ದೆ ಖಾಲಿ ಇಲ್ಲದ ಕಾರಣ ಹಿಂದಿ ಶಿಕ್ಷಕರನ್ನು ವಿಶೇಷ ಶಿಕ್ಷಕರೆಂದು ಪರಿಗಣಿಸಿ, ಸಾಮಾನ್ಯ ಮತ್ತು ಇತರ ಹುದ್ದೆಗಳಿಗೂ ವರ್ಗಾವಣೆ ಹೊಂದಲು ಅವಕಾಶ ಕಲ್ಪಿಸಬೇಕು ಎಂದು ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ,ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್‌ ಎನ್‌.ಎಸ್‌. ಶಿಕ್ಷಣ ಇಲಾಖೆಯ ಆಯುಕ್ತರನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು