ಶನಿವಾರ, ಜನವರಿ 18, 2020
20 °C

ತಂತ್ರಜ್ಞಾನ ಸಮ್ಮೇಳನ ನಾಳೆಯಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:ತಂತ್ರಜ್ಞಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನ್ಯೂ ಹೊರೈಜಾನ್ ತಾಂತ್ರಿಕ ಕಾಲೇಜು, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಹಾಗೂ ಕ್ಯಾಪ್ ಜೆಮಿನಿ ಸಹಭಾಗಿತ್ವದಲ್ಲಿ ಇದೇ 19ರಿಂದ 21ರವರೆಗೆ ಮಾರತ್ತಹಳ್ಳಿಯ ಕಾಲೇಜಿನ ಪ್ರಾಂಗಣದಲ್ಲಿ ಅಂತರರಾಷ್ಟ್ರೀಯ ತಂತ್ರಜ್ಞಾನ ಸಮ್ಮೇಳನ ಆಯೋಜಿಸಲಾಗಿದೆ.

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಂಜುನಾಥ್, ‘ಸಮ್ಮೇಳನದಲ್ಲಿ ವಿಟಿಯು ಕುಲಸಚಿವ ಪ್ರೊ.ಎ.ಎಸ್.ದೇಶಪಾಂಡೆ ಭಾಗವಹಿಸಲಿದ್ದಾರೆ. ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಬೆಳವಣಿಗೆ ಬಗ್ಗೆ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ವಿವಿಧ ದೇಶಗಳ ತಜ್ಞರು, ಸಂಶೋಧಕರು, ವಿಜ್ಞಾನಿಗಳು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು