ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಹಣ ನೀಡದಿದ್ದಕ್ಕೆ ಟೆಕಿ ಅಡ್ಡಗಟ್ಟಿ ಬೆದರಿಕೆ

Published 5 ಮೇ 2024, 15:52 IST
Last Updated 5 ಮೇ 2024, 15:52 IST
ಅಕ್ಷರ ಗಾತ್ರ

ಬೆಂಗಳೂರು: ಹಣ ನೀಡಲಿಲ್ಲವೆಂಬ ಕಾರಣಕ್ಕೆ ಸಾಫ್ಟ್‌ವೇರ್ ಎಂಜಿನಿಯರ್‌ವೊಬ್ಬರನ್ನು (ಟೆಕಿ) ಅಡ್ಡಗಟ್ಟಿ ಬೆದರಿಕೆಯೊಡ್ಡಲಾಗಿದ್ದು, ಕೃತ್ಯ ಎಸಗಿದ್ದ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಏಪ್ರಿಲ್ 28ರಂದು ಬೆಳಿಗ್ಗೆ ನಡೆದಿರುವ ಘಟನೆ ಸಂಬಂಧ ಹೊಸೂರು ರಸ್ತೆಯ ಅಹಮ್ಮದ್ ಎಂಬುವವರು ದೂರು ನೀಡಿದ್ದಾರೆ. ಅಪರಿಚಿತ ಲಿಂಗತ್ವ ಅಲ್ಪಸಂಖ್ಯಾತರೊಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ದೂರುದಾರ ತಮ್ಮ ಕುಟುಂಬದ ಜೊತೆ ಕಾರಿನಲ್ಲಿ ಶೋಲೆ ವೃತ್ತಕ್ಕೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಸ್ಥಳಕ್ಕೆ ಬಂದಿದ್ದ ಆರೋಪಿ, ಹಣ ಕೇಳಿದ್ದರು. ದೂರುದಾರ ಹಣ ಕೊಟ್ಟಿರಲಿಲ್ಲ. ಆರೋಪಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅದನ್ನು ನಿರ್ಲಕ್ಷಿಸಿದ್ದ ದೂರುದಾರ, ಸ್ಥಳದಿಂದ ಹೊರಟಿದ್ದರು. ಆಟೊದಲ್ಲಿ ಹಿಂಬಾಲಿಸಿದ್ದ ಆರೋಪಿ, ಮಾರ್ಗಮಧ್ಯೆ ಅಡ್ಡಗಟ್ಟಿ ಪುನಃ ಜಗಳ ತೆಗೆದು ಬೆದರಿಸಿದ್ದರು. ನಂತರ, ಆರೋಪಿ ಸ್ಥಳದಿಂದ ಹೊರಟು ಹೋಗಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT