ಶುಕ್ರವಾರ, ಫೆಬ್ರವರಿ 21, 2020
18 °C

ತೆಪ್ಪ ಮಗುಚಿ ಕೆರೆಗೆ ಉರುಳಿದ ಟೆಕ್ಕಿಗಳು, ಓರ್ವ ಕಣ್ಮರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ತೆಪ್ಪ ಮಗುಚಿ ಸಾಫ್ಟ್‌ವೇರ್ ಎಂಜಿನಿಯರ್ ಕಣ್ಮರೆಯಾಗಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲ್ಕೆರೆ ಕೆರೆಯಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ನಿವಾಸಿ ಸಚಿನ್ ಕಣ್ಮರೆಯಾದ ಟೆಕಿ.

ಶುಕ್ರವಾರ ರಾತ್ರಿ ಕೆಲ್ಕೆರೆಯಲ್ಲಿ ಪಾರ್ಟಿ ಮಾಡಿದ್ದ ಸಚಿನ್ ಮತ್ತು ಉಲ್ಲಾಸ್ ಎಂಬ ಇಬ್ಬರು ಬಳಿಕ ಕೆರೆಯಲ್ಲಿ ತೆಪ್ಪದಲ್ಲಿ ವಿಹಾರಕ್ಕೆ ತೆರಳಿದ್ದರು. ಈ ವೇಳೆ ತೆಪ್ಪ ಮಗುಚಿ ಇಬ್ಬರೂ ನೀರಿಗೆ ಬಿದ್ದಿದ್ದಾರೆ.

ಉಲ್ಲಾಸ್ ಈಜಿ ದಡ ಸೇರಿದ್ದಾರೆ. ಸಚಿನ್ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಕೆರೆಯಲ್ಲಿ ಶೋಧಕಾರ್ಯ ಕೈಗೊಂಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು