ಬೆಂಗಳೂರು: ಅಡುಗೆ ಮಾಡುವ ವಿಚಾರಕ್ಕೆ ಅತ್ತೆಯ ಜತೆ ನಡೆದ ಗಲಾಟೆಯಿಂದ ನೊಂದ ಸೊಸೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ಬಿಗೆರೆಯಲ್ಲಿ ಘಟನೆ ನಡೆದಿದೆ.

ಸುಷ್ಮಾ(35) ಆತ್ಮಹತ್ಯೆ ಮಾಡಿಕೊಂಡ ಟೆಕಿ. ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

ಸುಷ್ಮಾ ಅವರು ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಅವರನ್ನು ಮದುವೆ ಆಗಿದ್ದರು. ದಂಪತಿಗೆ ನಾಲ್ಕು ವರ್ಷದ ಪುತ್ರ ಇದ್ದಾನೆ.

‘ಮನೆಯಲ್ಲಿ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆಗಳು ನಡೆಯುತ್ತಿದ್ದವು. ಅತ್ತೆ ಕಲ್ಪನಾ ಅವರೊಂದಿಗೆ ಮಂಗಳವಾರ ಅಡುಗೆ ಮಾಡುವ ವಿಚಾರದಲ್ಲಿ ವಾಗ್ವಾದ ಉಂಟಾಗಿತ್ತು. ಗಲಾಟೆ ವಿಕೋಪಕ್ಕೆ ಹೋದ ಮೇಲೆ ನೊಂದುಕೊಂಡು ಸುಷ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಸುಷ್ಮಾ ಕುಟುಂಬಸ್ಥರು ಆರೋಪಿಸಿದ್ದಾರೆ.

‘ವರದಕ್ಷಿಣೆ ಕಿರುಕುಳ ಸಂಬಂಧ ಪುನೀತ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು. ಪ್ರಕರಣದ ಸಂಬಂಧ ಕಲ್ಪನಾ ಅವರನ್ನೂ ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸರು ಹೇಳಿದರು.

ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.