ಬುಧವಾರ, ಜೂನ್ 3, 2020
27 °C

ಸಾರಿಗೆ ಕ್ಷೇತ್ರಕ್ಕೆ ತಂತ್ರಜ್ಞಾನ: ಇಸ್ರೊಗೆ ಸವದಿ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸೋರಿಕೆ ತಡೆದು, ಕಾರ್ಯದಕ್ಷತೆ ಹೆಚ್ಚಿಸಲು ತಂತ್ರಜ್ಞಾನವೊಂದನ್ನು ಅಭಿವೃದ್ಧಿ
ಪಡಿಸಿಕೊಡುವಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಇಸ್ರೊ ಅಧ್ಯಕ್ಷ ಕೆ.ಶಿವನ್‌ ಅವರಿಗೆ ಮನವಿ ಮಾಡಿದ್ದಾರೆ.

ಬುಧವಾರ ಇಸ್ರೊ ಕೇಂದ್ರ ಕಚೇರಿಯಲ್ಲಿ ಶಿವನ್‌ ಅವರನ್ನು ಭೇಟಿ ಮಾಡಿ ಸವದಿ ಮಾತುಕತೆ ನಡೆಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಿವನ್‌ ಅವರು, ಅಗತ್ಯ ತಂತ್ರಜ್ಞಾನ ಅಭಿವೃದ್ಧಿಪಡಿಸಿ ನೀಡುವುದಾಗಿ ಭರವಸೆ ನೀಡಿದರು.

ಕೊರೋನಾ ಪಿಡುಗಿನಿಂದಾಗಿ ಸಾರಿಗೆ ಕ್ಷೇತ್ರ ಸಂಕಷ್ಟಕ್ಕೆ ತುತ್ತಾಗಿದೆ. ಮುಂಬರುವ ದಿನಗಳಲ್ಲಿ ಇದರಿಂದ ಚೇತರಿಸಿಕೊಳ್ಳಲು ಬಾಹ್ಯಾಕಾಶ ತಂತ್ರಜ್ಞಾನ ಬಳಸಿಕೊಳ್ಳುವ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಉಪಮುಖ್ಯಮಂತ್ರಿಯವರು ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಇಸ್ರೊ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ
ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು