ಸೋಮವಾರ, ಮಾರ್ಚ್ 27, 2023
21 °C
ಯುವಜನೋತ್ಸವಕ್ಕೆ ಚಾಲನೆ ನೀಡಿದ ಕೇಂದ್ರ ಕೃಷಿ ಸಚಿವ ತೋಮರ್

ಹವಾಮಾನ ವೈಪರೀತ್ಯಕ್ಕೆ ತಂತ್ರಜ್ಞಾನದ ರಕ್ಷಣೆ: ನರೇಂದ್ರ ಸಿಂಗ್‌ ತೋಮರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೃಷಿಯ ಎಲ್ಲ ಹಂತಗಳಲ್ಲೂ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡರೆ ಹವಾಮಾನ ವೈಪರೀತ್ಯಗಳಂತಹ ಪರಿಸ್ಥಿತಿಯಲ್ಲೂ ಸಮೃದ್ಧ ಬೆಳೆ ತೆಗೆಯಬಹುದು, ಲಾಭ ಗಳಿಸಬಹುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಹೇಳಿದರು.

ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಭಾರತೀಯ ಕೃಷಿ ಅನುಸಂದಾನ ಪರಿಷತ್‌ ಬುಧವಾರ ಹಮ್ಮಿಕೊಂಡಿದ್ದ ಅಖಿಲ ಭಾರತ ಕೃಷಿ ವಿಶ್ವವಿದ್ಯಾಲಯ
ಗಳ ಯುವಜನೋತ್ಸವ, ಚತುರ ಕೃಷಿ ಅಭಿವೃದ್ಧಿ ಮತ್ತು ನಾವಿನ್ಯತಾ ಯೋಜ
ನೆಗೆ ಚಾಲನೆ ನೀಡಿ ಮಾತನಾಡಿದರು.

ಎಲ್ಲ ಕ್ಷೇತ್ರಗಳಲ್ಲೂ ಇಂದು ತಾಂತ್ರಿ
ಕತೆ ಪ್ರಮುಖ ಪಾತ್ರ ವಹಿಸುತ್ತಿದೆ. ಅವು
ಗಳನ್ನು ಸೂಕ್ತವಾಗಿ ಬಳಸಿಕೊಂಡು ಉತ್ತಮ ಸಾಧನೆ ತೋರಬೇಕಿದೆ. ಸೂಕ್ಷ್ಮ ನೀರಾವರಿ ತಂತ್ರಜ್ಞಾನ ಹಾಗೂ ಇತರೆ ತಂತ್ರಜ್ಞಾನಗಳನ್ನು ದೇಶದ ಕೃಷಿ ಕ್ಷೇತ್ರದಲ್ಲಿ ಸಮರ್ಥವಾಗಿ ಬಳಸಿಕೊಳ್ಳ
ಲಾಗಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರ
ಜ್ಞಾನ ಅಳವಡಿಸಿಕೊಂಡರೆ ಕೃಷಿ ಕಾರ್ಯ
ಗಳು ಸುಲಭವಾಗಲಿವೆ. ಡಿಜಿಟಲ್ ತಂತ್ರ
ಜ್ಞಾನದ ಮೂಲಕ ಆರ್ಥಿಕ ಸೋರಿಕೆ
ಯನ್ನೂ ತಡೆಯಬಹುದು ಎಂದರು.

ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ್‌, ‘ಯಕ್ಷಗಾನ, ಡೊಳ್ಳುಕುಣಿತ, ಕಂಸಾಳೆ ನಮ್ಮ ಹಳ್ಳಿಗಾಡಿನ ನಿಜವಾದ ಸಾಂಸ್ಕೃತಿಕ ಕಲೆಯನ್ನು ಬಿಂಬಿಸುತ್ತವೆ. ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ರೈತರ ಮಕ್ಕಳಿಗೆ ಶೇ 40 ಇದ್ದ ಮೀಸಲಾತಿ ಪ್ರಮಾಣವನ್ನು ಶೇ 50ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಹೆಚ್ಚಿನ ರೈತರ ಮಕ್ಕಳು ಕೃಷಿ ಶಿಕ್ಷಣ ಪಡೆಯಲು ಸಹಾಯವಾಗಿದೆ’ ಎಂದು ಹೇಳಿದರು.

ಸಾಂಸ್ಕೃತಿಕ ಸಂಭ್ರಮದಲ್ಲಿ ದೇಶದ ವಿವಿಧ ವಿಶ್ವವಿದ್ಯಾಲಯಗಳ ಎರಡು ಸಾವಿರ ವಿದ್ಯಾರ್ಥಿಗಳು ಭಾಗವಹಿಸು
ತ್ತಿದ್ದಾರೆ. ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೃಷಿ ಅನುಸಂಧಾನ ಪರಿಷತ್‌ ಉಪ ಮಹಾ ನಿರ್ದೇಶಕ ಆರ್‌.ಸಿ.ಅಗರವಾಲ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ.ಕಳಸದ, ಕುಲಪತಿ ಎಸ್.ವಿ.ಸುರೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು