ಬೆಂಗಳೂರು: ‘ಕೇಂದ್ರ ಸಚಿವರೊಂದಿಗೆ ಮಾತನಾಡಿ, ಸದ್ಯಕ್ಕೆ ಮೆಟ್ರೊ ದರ ಹೆಚ್ಚಳವನ್ನು ನಿಲ್ಲಿಸಲಾಗಿದೆ. ದರ ನಿಗದಿ ಸಮಿತಿಯನ್ನು ಹೊಸದಾಗಿ ರಚಿಸಲು ರಾಜ್ಯ ಸರ್ಕಾರವು ಒತ್ತಾಯಿಸಬೇಕು’ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.

‘ಮುಖ್ಯಮಂತ್ರಿಗಳೇ ನಾಟಕ ನಿಲ್ಲಿಸಿ’, ‘ದರ ಏರಿಕೆ ಬೇಡ’ ಎಂಬ ಘೋಷಣೆಗಳಿದ್ದ, ದರ ನಿರ್ಧಾರ ಸಮಿತಿಯ ವರದಿಯ ಆಯ್ದ ಭಾಗದ ವಿವರವನ್ನು ಹೊಂದಿದ ಟೀ-ಶರ್ಟ್ ಧರಿಸಿ ಆರ್.ವಿ. ರಸ್ತೆ ನಿಲ್ದಾಣಕ್ಕೆ ಬಂದಿದ್ದ ತೇಜಸ್ವಿ ಸೂರ್ಯ, ಮೆಟ್ರೊ ಪ್ರಯಾಣಿಕರೊಂದಿಗೆ ಭಾನುವಾರ ಸಂವಾದ ನಡೆಸಿದರು.

‘ರಾಜ್ಯ ಸರ್ಕಾರವು ದರ ಹೆಚ್ಚಳ ಮಾಡಿದ್ದು, ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ಮಾಡುವುದನ್ನು ನಿಲ್ಲಿಸಬೇಕು. ಫೆ.9ರಿಂದ ದರ ಹೆಚ್ಚಿಸಲು ರಾಜ್ಯ ಸರ್ಕಾರ ಹೊರಟಿತ್ತು. ನನ್ನ ಒತ್ತಾಯದ ಮೇರೆಗೆ ಸರಿಯಾದ ಸಮಯದಲ್ಲಿ ಕೇಂದ್ರದ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಹಸ್ತಕ್ಷೇಪ ಮಾಡಿದ್ದರಿಂದ ಜಯ ಸಿಕ್ಕಿದೆ. ಆದರೆ ಇದು ತಾತ್ಕಾಲಿಕ ಪರಿಹಾರ ಮಾತ್ರ’ ಎಂದು ಹೇಳಿದರು.

‘ಹಿಂದಿನ ಸರ್ಕಾರಗಳು ಮಾಡಿದಂತೆ ರಾಜ್ಯ ಸರ್ಕಾರವು ಮೆಟ್ರೊಗೆ ಶ್ಯಾಡೋ ಕ್ಯಾಶ್ ಸಹಾಯವನ್ನು ಪುನಃ ನೀಡಬೇಕು. ನ್ಯಾಯಸಮ್ಮತ, ವೈಜ್ಞಾನಿಕ ಹಾಗೂ ಪಾರದರ್ಶಕವಾಗಿ ದರ ಪರಿಷ್ಕರಣೆಗೆ ಹೊಸ ಸಮಿತಿಯನ್ನು ಪುನರ್ರಚಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ಸಂಚಾರ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರಿನಲ್ಲಿ ಕೈಗೆಟುಕುವ ಸಾರ್ವಜನಿಕ ಸಾರಿಗೆಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ’ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು. ಶಾಸಕ ಸಿ.ಕೆ.ರಾಮಮೂರ್ತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.