ಬುಧವಾರ, ಜೂನ್ 3, 2020
27 °C
‘ಟೆಲಿ ಕನ್ಸಲ್ಟೇಷನ್‌’ ಸೇವೆ ಜಾರಿ

ಕೊರೊನಾ: ದೂರವಾಣಿ ಮೂಲಕ ಆರೋಗ್ಯ ಸಲಹೆ ಸೇವೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿನ ಲಕ್ಷಣಗಳು, ಆರೋಗ್ಯ ಸಮಸ್ಯೆಗಳು ಹಾಗೂ ಈ ಕುರಿತ ಯಾವುದೇ ಸಂದೇಹಗಳನ್ನು ಪರಿಹರಿಸಿಕೊಳ್ಳಲು ಸಾರ್ವಜನಿಕರು ನುರಿತ ವೈದ್ಯರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಲು ಪೋರ್ಟಿಯಾ ವೈದ್ಯಕೀಯ ಸಂಸ್ಥೆ ವತಿಯಿಂದ ‘ಟೆಲಿ ಕನ್ಸಲ್ಟೇಷನ್' ಸೇವೆ ಜಾರಿಗೊಳಿಸಲಾಗಿದೆ. ಉಚಿತ ಸಹಾಯವಾಣಿ 08066744788ಗೆ ಕರೆ ಮಾಡುವ ಮೂಲಕ ಜನರು ಅಗತ್ಯ ಮಾಹಿತಿ ಪಡೆಯಬಹುದಾಗಿದೆ. 

ಈ ಸೇವೆಗೆ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥನಾರಾಯಣ ಅವರು ಬುಧವಾರ ಚಾಲನೆ ನೀಡಿದರು.

ನುರಿತ ವೈದ್ಯರ ತಂಡ ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 8ರವರೆಗೆ ಹಾಗೂ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಂದ ಕರೆ ಸ್ವೀಕರಿಸಿ ಸೂಕ್ತ ಮಾರ್ಗದರ್ಶನ ನೀಡಲಿದೆ. ಈ ಕುರಿತ ವೆಬ್‌ಸೈಟ್ ಲಿಂಕ್ (https://t.co/LqPmTkiEnY) ಮೂಲಕವೂ ವೈದ್ಯರ ಸಲಹೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕೋರೋನಾ ಮಾತ್ರವಲ್ಲದೆ ಇನ್ನಿತ ಆರೋಗ್ಯ ಸಮಸ್ಯೆ ಬಗ್ಗೆಯೂ ಮಾಹಿತಿ ಪಡೆಯಬಹುದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು