ಶುಕ್ರವಾರ, ಆಗಸ್ಟ್ 7, 2020
28 °C

ಟೆಲಿಗ್ರಾಂ ಆ್ಯಪ್‌ನಲ್ಲಿ ಪರಿಚಯ; ₹ 85 ಸಾವಿರ ವಂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಟೆಲಿಗ್ರಾಂ ಆ್ಯಪ್‌ನಲ್ಲಿ ಪರಿಚಯವಾಗಿದ್ದ ಸೈಬರ್ ವಂಚಕರು, ಹೂಡಿಕೆ ಹೆಸರಿನಲ್ಲಿ ನಗರದ ನಿವಾಸಿಯೊಬ್ಬರಿಂದ ₹ 85 ಸಾವಿರ ಪಡೆದು ವಂಚಿಸಿದ್ದಾರೆ.

ವಂಚನೆಗೀಡಾಗಿರುವ ಟಿ.ಆರ್.ನಗರದ ನಿವಾಸಿ ಶ್ರೀಗಣೇಶ್ ಎಂಬುವರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

‘ಇತ್ತೀಚೆಗೆ ಶ್ರೀಗಣೇಶ್ ಅವರನ್ನು ಪರಿಚಯಿಸಿಕೊಂಡಿದ್ದ ಆರೋಪಿಗಳು, ‘ಕ್ರಿಪ್ಟೋ ಕರೆನ್ಸಿಯನ್ನು ಖರೀದಿಸಿ, ಅದನ್ನು ಬಿಟ್‌ಕಾಯಿನ್ ರೂಪದಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ. ಆರಂಭದಲ್ಲಿ ಹಣ ಪಾವತಿಸಿ ಬಿಟ್ ಕಾಯಿನ್ ಖರೀದಿಸಬೇಕು’ ಎಂದಿದ್ದರು. ಅದನ್ನು ನಂಬಿದ್ದ ಯುವಕ, ಆರೋಪಿಗಳ ಖಾತೆಗಳಿಗೆ ಹಂತ ಹಂತವಾಗಿ ₹ 85 ಸಾವಿರ ಜಮೆ ಮಾಡಿದ್ದಾರೆ. ನಂತರ ಆರೋಪಿಗಳು ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ’ ಎಂದು ಪೊಲೀಸರು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು