ಭಾನುವಾರ, ಸೆಪ್ಟೆಂಬರ್ 25, 2022
29 °C

ಬೆಂಗಳೂರು ವಿವಿಯಲ್ಲಿ ದೇವಸ್ಥಾನ ನಿರ್ಮಾಣ: 13ಕ್ಕೆ ಸಿಂಡಿಕೇಟ್‌ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಇದೇ 13ರಂದು ಸಿಂಡಿಕೇಟ್‌ ವಿಶೇಷ ಸಭೆ ನಡೆಯಲಿದೆ.

ಈ ಸಭೆಯಲ್ಲಿ ದೇವಸ್ಥಾನಕ್ಕೆ ನಿರ್ದಿಷ್ಟ ಜಾಗ ನೀಡುವ ಸಂಬಂಧ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ದೇವಸ್ಥಾನ ನಿರ್ಮಾಣ ಕಾಮಗಾರಿ ಶುಕ್ರವಾರವೂ ಮುಂದುವರಿಸಿದ್ದಕ್ಕೆ ಪ್ರತಿಭಟನೆ ನಡೆಸಲು ಮುಂದಾದ ಕೆಲವು ವಿದ್ಯಾರ್ಥಿಗಳನ್ನು ಪ್ರಾಧ್ಯಾಪಕರೇ ಸಮಾಧಾನಪಡಿಸಿದರು. 

ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರೇ ಜಾಗವನ್ನು ಗುರುತಿಸಲಿ ಎನ್ನುವ ಆಗ್ರಹ ಕೂಡ ವಿದ್ಯಾರ್ಥಿ ಸಮೂಹದಿಂದ ವ್ಯಕ್ತವಾಗಿವೆ.

‘ಗಣೇಶ ದೇವಸ್ಥಾನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹಿಂದಿನ ಕುಲಪತಿ ಅವರು ಸಿಂಡಿಕೇಟ್‌ ಅನುಮೋದನೆ ಪಡೆದಿರಲಿಲ್ಲ. ವಿಶ್ವವಿದ್ಯಾಲಯದ ಜತೆ ಮಾತುಕತೆ ನಡೆಸಿ, ಸೌಹಾರ್ದಯುತವಾಗಿ ದೇವಸ್ಥಾನ ಸ್ಥಳಾಂತರಿಸಿ ಎಂದು ಸರ್ಕಾರ ಆದೇಶ ನೀಡಿತ್ತು. ಈ ಬಗ್ಗೆಯೂ ಸಿಂಡಿಕೇಟ್‌ ಸಭೆಯಲ್ಲಿ ಚರ್ಚಿಸಿಲ್ಲ’ ಎಂದು ಸಿಂಡಿಕೇಟ್ ಸದಸ್ಯ ಡಾ. ಎಚ್. ಸುಧಾಕರ್ ತಿಳಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು