ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಗುಲ ನಿರ್ಮಾಣ| ಬೆಂಗಳೂರು ವಿ.ವಿ ಏಕಪಕ್ಷೀಯ ನಿರ್ಧಾರ ಖಂಡನೀಯ: ಎಐಡಿಎಸ್‌ಒ

Last Updated 10 ಸೆಪ್ಟೆಂಬರ್ 2022, 18:42 IST
ಅಕ್ಷರ ಗಾತ್ರ

ಬೆಂಗಳೂರು: ‘ಎಲ್ಲರ ಅಭಿಪ್ರಾಯ ಪರಿಗಣಿಸದೆ ಬೆಂಗಳೂರು ವಿವಿ ಆವರಣದಲ್ಲಿ ದೇವಸ್ಥಾನ ನಿರ್ಮಿಸುವ ಕಾರ್ಯ ಕೈಗೊಂಡಿರುವುದು ಖಂಡನೀಯ’ ಎಂದು ಎಐಡಿಎಸ್‌ಒ ಜಿಲ್ಲಾ ಸಮಿತಿ ತಿಳಿಸಿದೆ.

‘ವಿವಿ ಆವರಣದಲ್ಲಿ ಪ್ರಜಾತಾಂತ್ರಿಕ ವಾತಾವರಣವನ್ನು ಕೆಡವಲು ಬೀಡುವುದಿಲ್ಲ. ವಿದ್ಯಾರ್ಥಿಗಳ ಮತ್ತು ಬೋಧಕ ಸಿಬ್ಬಂದಿಯ ಅಭಿಪ್ರಾಯಗಳನ್ನು ಪಡೆಯದೆ ಏಕಪಕ್ಷೀಯವಾಗಿ ವಿವಿಯ ಆಡಳಿತ ಮಂಡಳಿ ನೂತನ ಕಟ್ಟಡ ನಿರ್ಮಿಸುತ್ತಿರುವುದು ಖಂಡನೀಯ. ಹೋರಾಟನಿರತ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ನಿಂದಿಸಿರುವುದು ಬೇಸರದ ಸಂಗತಿ. ಕೂಡಲೇ ಕುಲಪತಿಗಳು ಮಧ್ಯಸ್ಥಿಕೆ ವಹಿಸಿ ಈ ವಿಷಯವನ್ನು ಇತ್ಯರ್ಥವಾಗುವಂತೆ ನೋಡಿಕೊಳ್ಳಬೇಕು‘ ಎಂದು ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ಕಲ್ಯಾಣ ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT