ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ದೇವಾಲಯಗಳಿಗೆ ಆದಾಯವೇ ಇಲ್ಲ

Last Updated 24 ಜೂನ್ 2020, 21:20 IST
ಅಕ್ಷರ ಗಾತ್ರ

ಬೆಂಗಳೂರು: ‘ದೇವಸ್ಥಾನಗಳು ತೆರೆದ ಮಾತ್ರಕ್ಕೆ ಅವುಗಳಿಗೆ ಆದಾಯ ಬರುತ್ತಿದೆ ಎಂಬ ಸರ್ಕಾರದ ವಾದ ಒಪ್ಪಲು ಸಾಧ್ಯವಿಲ್ಲ’ ಎಂದು ‘ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕ-ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ’ ಹೈಕೋರ್ಟ್‌ಗೆ ತಿಳಿಸಿದೆ.

‘ರಾಜ್ಯದಾದ್ಯಂತ ‘ಸಿ’ ವರ್ಗಕ್ಕೆ ಒಳಪಟ್ಟ 35 ಸಾವಿರಕ್ಕೂ ಹೆಚ್ಚು ಮುಜರಾಯಿ ದೇವಾಲಯಗಳ ಅರ್ಚಕರಿಗೆ ಆರ್ಥಿಕ ಪರಿಹಾರ ನೀಡುವ ವಿಷಯದಲ್ಲಿ ರಾಜ್ಯ ಸರ್ಕಾರ ಗಂಭೀರವಾಗಿ ನಡೆದುಕೊಂಡಿಲ್ಲ’ ಎಂದು ಒಕ್ಕೂಟ ದೂರಿದೆ.

ಈ ಕುರಿತಂತೆ ವಕೀಲ ಶ್ರೀಹರಿ ಕೌಸ್ತ ಮತ್ತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಎನ್. ದೀಕ್ಷಿತ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಪ್ರಮಾಣ ಪತ್ರ ಸಲ್ಲಿಸಿದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ 'ಸಿ' ಕೆಟಗರಿಯ 35 ಸಾವಿರ ದೇವಸ್ಥಾನಗಳ ಅರ್ಚಕರ ನೆರವಿಗೆ ತಸ್ತೀಕು ಹಣ ಬಿಡುಗಡೆ ಮಾಡುವ ಸಂಬಂಧ ಸರ್ಕಾರ 2020ರ ಮೇ 5ರಂದು ಆದೇಶ ಹೊರಡಿಸಿತ್ತು. ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಶಿವಮೊಗ್ಗ, ಬೆಂಗಳೂರು ನಗರ, ಹಾವೇರಿ, ಚಾಮರಾಜನಗರ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅರ್ಚಕರಿಗೆ ತಸ್ತೀಕು ಹಣ ತಲುಪಿಲ್ಲ ಎಂದು ಪ್ರಮಾಣ ಪತ್ರದಲ್ಲಿ ವಿವರಿಸಲಾಗಿದೆ.

‘ಸಿ ಕೆಟಗರಿಯ 34 ಸಾವಿರ ದೇವಸ್ಥಾನಗಳಿಗೆ ತಲಾ 12 ಸಾವಿರದಂತೆ ತಸ್ತೀಕು ಹಣದ ಮೊತ್ತ ₹ 13 ಕೋಟಿ ಬಿಡುಗಡೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರು ಕೋರ್ಟ್‌ಗೆ ತಿಳಿಸಿದರು.

‘ಸಂಕಷ್ಟದಲ್ಲಿರುವ ವಕೀಲರಿಗೆ ನೆರವು ನೀಡಬಹುದು ಎಂದಾದರೆ, ಅರ್ಚಕರಿಗೆ ಅಂತಹ ನೆರವು ಏಕಿಲ್ಲ ಎಂಬ ಬಗ್ಗೆ ವಿವರಣೆ ನೀಡಿ’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT