ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಗುಲಗಳ ಆರ್‌ಟಿಐ ವ್ಯಾಪ್ತಿ: ಪಿಐಎಲ್‌ ವಜಾ

Published 12 ಜೂನ್ 2024, 14:53 IST
Last Updated 12 ಜೂನ್ 2024, 14:53 IST
ಅಕ್ಷರ ಗಾತ್ರ

ಬೆಂಗಳೂರು: ‘ಮಾಹಿತಿ ಹಕ್ಕು ಕಾಯ್ದೆಯಡಿ ದೇಗುಲದ ಮಾಹಿತಿ ಕೇಳುವುದು ಆ ದೇಗುಲದ ಅರ್ಚಕರಿಗೆ ತೊಂದರೆ ನೀಡಿದಂತಾಗುವುದಿಲ್ಲ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್‌,  ‘ದೇವಾಯಲಯಗಳನ್ನು ಮಾಹಿತಿ ಹಕ್ಕು ಕಾಯ್ದೆ–2005ರಿಂದ ಹೊರಗಿಡಲು ನಿರ್ದೇಶಿಸಬೇಕು’ ಎಂದು ಕೋರಿಕೆಯನ್ನು ತಳ್ಳಿ ಹಾಕಿದೆ.

ಈ ಕುರಿತಂತೆ, ‘ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಪೂಜಾರಿಗಳು, ಆಗಮಿಕರು ಮತ್ತು ಅರ್ಚಕರ ಸಂಘ’ದ ಕಾರ್ಯದರ್ಶಿ ಕೆ.ಎಸ್‌.ಎನ್‌.ದೀಕ್ಷಿತ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ ಅರ್ಜಿ ವಜಾಗೊಳಿಸಿತು.

‘ಅರ್ಜಿದಾರರು ಅರ್ಚಕರಾಗಿರುವ ದೇವಾಲಯ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿದ್ದು, ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರ ಎನಿಸಿದೆ. ಹೀಗಾಗಿ, ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸಲು ನೇಮಕ ಮಾಡಲಾಗಿರುವ ಸಿಬ್ಬಂದಿಯ ಕುರಿತಾದ ಸುತ್ತೋಲೆಯನ್ನು ರದ್ದುಪಡಿಸಲು ಆಗದು’ ಎಂದು ನ್ಯಾಯಪೀಠ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT