ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಷಾಚರಣೆಗೆ ಸಂಗ್ರಹಿಸಿದ್ದ ₹10 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ

Last Updated 1 ಜನವರಿ 2023, 22:37 IST
ಅಕ್ಷರ ಗಾತ್ರ

ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಗ್ರಾಹಕರಿಗೆ ಡ್ರಗ್ಸ್ ಮಾರಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೋಲಾರ ಜಿಲ್ಲೆಯ ಸೀನಪ್ಪ (40) ಹಾಗೂ ಬೆಂಗಳೂರು ಜಾಲಹಳ್ಳಿಯ
ಜಿ. ನಾಗೇಶ್ (55) ಬಂಧಿತರು. ಇವರಿಂದ ₹ 10 ಲಕ್ಷ ಮೌಲ್ಯದ 10 ಕೆ.ಜಿ. ಗಾಂಜಾ, 1 ಕೆ.ಜಿ ಹಶೀಷ್, ಕಾರು, ದ್ವಿಚಕ್ರ ವಾಹನ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’. ‘ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಅಪಾರ ಪ್ರಮಾಣದ ಡ್ರಗ್ಸ್ ತರುತ್ತಿದ್ದ ಆರೋಪಿಗಳು, ಅದನ್ನು ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದರು.

ಹೊಸ ವರ್ಷಾಚರಣೆ ಪಾರ್ಟಿಗಳು ಹಾಗೂ ಇತರೆ ಸ್ಥಳಗಳಲ್ಲಿ ಡ್ರಗ್ಸ್ ಮಾರುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಡ್ರಗ್ಸ್
ಸಂಗ್ರಹಿಸಿಟ್ಟುಕೊಂಡಿದ್ದರು’ ಎಂದು ತಿಳಿಸಿದರು.

‘ಆರೋಪಿಗಳ ಕೃತ್ಯದ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಬಂಧಿತ ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ವಿರುದ್ಧ ಪ್ರಕರಣ
ದಾಖಲಿಸಿಕೊಳ್ಳಲಾಗಿದ್ದು, ತನಿಖೆ
ಮುಂದುವರಿಸಲಾಗಿದೆ’ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT