ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯ ವಿವಾದ: ಸಿಎಂ ಭೇಟಿಗೆ ಅವಕಾಶ ಕೋರಿದ ಸಾಹಿತಿಗಳು

Last Updated 22 ಜೂನ್ 2022, 20:35 IST
ಅಕ್ಷರ ಗಾತ್ರ

ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಯಲ್ಲಿನ ಲೋಪಗಳ ಕುರಿತು ಚರ್ಚಿಸಲು ಸಮಯಾವಕಾಶ ನೀಡುವಂತೆ ಕೋರಿ ಸಾಹಿತಿಗಳು, ಚಿಂತಕರು ಮತ್ತು ಪ್ರಗತಿಪರ ಹೋರಾಟಗಾರರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬುಧವಾರ ಪತ್ರ ಬರೆದಿದ್ದಾರೆ.

‘ಕರ್ನಾಟಕದ ಜಾಗೃತ ನಾಗರಿಕರು’ ಎಂಬ ಶೀರ್ಷಿಕೆಯಡಿ ಪತ್ರ ಬರೆದಿರುವ ಸಾಹಿತಿಗಳಾದ ಕೆ. ಮರುಳಸಿದ್ದಪ್ಪ, ಎಸ್‌.ಜಿ. ಸಿದ್ದರಾಮಯ್ಯ, ವಿಜಯಾ, ರಾಜೇಂದ್ರ ಚೆನ್ನಿ, ಬಂಜಗೆರೆ ಜಯಪ್ರಕಾಶ್, ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್‌. ವಿಮಲಾ, ವಕೀಲರಾದ ಶಿಕ್ಷಣ ತಜ್ಞ ಬಿ. ಶ್ರೀಪಾದ ಭಟ್‌, ವೈದ್ಯೆ ಹಾಗೂ ಸಾಹಿತಿ ವಸುಂಧರಾ ಭೂಪತಿ, ಮುಖ್ಯಮಂತ್ರಿಯವರ ಜತೆಗೆ ಚರ್ಚೆಗೆ ಸಮಯ ಕೋರಿದ್ದಾರೆ.

‘ಪಠ್ಯಪುಸ್ತಕಗಳ ಪರಿಷ್ಕರಣೆಯು ಏಕಪಕ್ಷೀಯವಾಗಿ ನಡೆದಿದೆ. ನಾಡಿನ ಅನೇಕ ದಾರ್ಶನಿಕರು, ಗಣ್ಯರಿಗೆ ಅವಮಾನ ಮಾಡಲಾಗಿದೆ. ತಪ್ಪುಗಳನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದೀರಿ. ಆದರೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅದಕ್ಕೆ ವಿರುದ್ಧವಾಗಿ ಹೇಳಿಕೆ ನೀಡುತ್ತಿದ್ದಾರೆ. ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆದು ಹಳೆಯ ಪಠ್ಯ‍ಪುಸ್ತಕಗಳನ್ನೇ ಮುಂದುವರಿಸಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT