ಸಾಹಿತಿ ಟಿ.ಜಿ.ಮುಡೂರು ನಿಧನ

ಸುಬ್ರಹ್ಮಣ್ಯ: ಸುಳ್ಯ ತಾಲ್ಲೂಕಿನ ಪಂಜ ನಿವಾಸಿ, ಸಾಹಿತಿ ತಮ್ಮಯ್ಯ ಗೌಡ ಮುಡೂರು (95) ವಯೋಸಹಜ ಅನಾರೋಗ್ಯದಿಂದ ಪುತ್ತೂರಿನಲ್ಲಿ ಬುಧವಾರ ನಿಧನರಾದರು. ಅವರಿಗೆ ಪುತ್ರ, ಮೂವರು ಪುತ್ರಿಯರು ಇದ್ದಾರೆ.
25 ವರ್ಷಕ್ಕೂ ಅಧಿಕ ಸಮಯ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಪ್ರತಿನಿಧಿಯಾಗಿ, 8 ವರ್ಷಗಳ ಕಾಲ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. ಸುಳ್ಯ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿಯೂ ಆಯ್ಕೆಾಗಿದ್ದರು. ಅವರ 30ಕ್ಕೂ ಹೆಚ್ಚು ಕೃತಿಗಳು ಪ್ರಕಟಗೊಂಡಿವೆ. ಗುರುವಾರ (ಏ.21) ಬೆಳಿಗ್ಗೆ ಅವರ ಅಂತಿಮ ದರ್ಶನದ ಬಳಿಕ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬ ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.