ಶುಕ್ರವಾರ, ಜನವರಿ 28, 2022
25 °C

ಸಾಧಕ ವಿದ್ಯಾರ್ಥಿಗಳ ಜೊತೆ ರಾಜ್ಯಪಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸುವ ದೊಡ್ಡ ಹೊಣೆಗಾರಿಕೆ ಮಕ್ಕಳಲ್ಲಿದೆ. ಹೀಗಾಗಿ, ಮಕ್ಕಳಿಗೆ ಮೌಲ್ಯಾಧರಿತ ಶಿಕ್ಷಣ ನೀಡಬೇಕಿದೆ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಹೇಳಿದರು.

ವಿವಿಧ ಕ್ಷೇತ್ರಗಳಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಚಿಲ್ಡ್ರನ್ ಸ್ಪೇಸ್ ಕ್ಲಬ್ ಆಫ್ ಇಂಡಿಯಾದ ಸಂಸ್ಥಾಪಕರಾದ ಗುಂಡ್ಲಮಡಗು ಶಾಂತಾ ಮೂರ್ತಿ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ತಮ್ಮ ಪೋಷಕರ ಜೊತೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿದರು.

ಈ ವೇಳೆ ಮಾತನಾಡಿದ ಅವರು, ‘ಮಕ್ಕಳಿಗೆ ಪ್ರೋತ್ಸಾಹ ನೀಡಿ, ಅವರ ಬೆಳವಣಿಗೆಯನ್ನು ಹತ್ತಿರದಿಂದ ನೋಡಿ ಸಂಭ್ರಮಿಸುವುದು ಬದುಕಿನ ಸುಂದರ ಕ್ಷಣಗಳು’ ಎಂದೂ ಬಣ್ಣಿಸಿದರು. ಮಕ್ಕಳಿಗೆ ಕೌಶಲ ಶಿಕ್ಷಣ ನೀಡುವ ಚಿಲ್ಡ್ರನ್ ಸ್ಪೇಸ್ ಕ್ಲಬ್‌ನ ಸಾಧನೆಗೆ ರಾಜ್ಯಪಾಲರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಸ್ಥೆಯ ವಲಯ ಸಮನ್ವಯಕಾರರಾದ ವಾಸಂತಿ ಅಣ್ಣಾಮಲೈ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತರುಣ್ ಎಸ್‌., ವಿಹಾನ್ ಸತೀಶ್, ಮೇಧಾ ಉಮೇಶ್‌ ಮತ್ತು ಆರುಷಿ ದಾಸ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು