ಬೆಂಗಳೂರು: ಪತ್ನಿ ಜತೆ ಮೊಬೈಲ್ನಲ್ಲಿ ಮಾತನಾಡುವುದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿ, ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದ ಇಬ್ಬರು ಆರೋಪಿಗಳನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಯಿಬಾಬಾ ನಗರ ನಿವಾಸಿ, ಗೂಡ್ಸ್ ವಾಹನ ಚಾಲಕ ಕಾರ್ತಿಕ್ ಎಸ್. ಹೆಚ್ (27) ಹಾಗೂ ಶಾಲಾ ವಾಹನ ಚಾಲಕ ಎನ್.ಜಿ. ಚೇತನ್ ಕುಮಾರ್ (33) ಬಂಧಿತರು.

ಅಭಿಷೇಕ್ ಹಾಗೂ ಆತನ ಸಹೋದರ ಅವಿನಾಶ್ ಹಿರೀಸಾವೆಯ ಸಹೋದರಿಯರನ್ನು ವಿವಾಹವಾಗಿದ್ದರು. ಸಹೋದರಿಯರಿಬ್ಬರಿಗೂ ಪರಿಚಿತನಾಗಿದ್ದ ಆರೋಪಿ ಕಾರ್ತಿಕ್, ಮನೆಗೆ ಬರುವುದು ಹಾಗೂ ಫೋನ್ನಲ್ಲಿ ಹೆಚ್ಚು ಮಾತನಾಡುತ್ತಿದ್ದ ಎಂದು ಪೊಲೀಸರು ತಿಳಿಸಿದರು.

‘ನ.27ರಂದು ರಾತ್ರಿ 8 ಗಂಟೆ ಸುಮಾರಿಗೆ ಬ್ಯಾಡರಹಳ್ಳಿಯ ಅನುಪಮಾ ಸ್ಕೂಲ್ ಬಳಿ ಕಾರ್ತಿಕ್ನನ್ನು ಭೇಟಿಯಾಗಿದ್ದ ಅಭಿಷೇಕ್, ಪತ್ನಿ ಜತೆ ಮಾತನಾಡದಂತೆ ತಿಳಿಸಿದ್ದ. ಆಗ ಕಾರ್ತಿಕ್ ಹಾಗೂ ಆತನ ಜೊತೆಗಿದ್ದ ಮಹಿಳೆಯರ ನಡುವೆ ಮಾತು ಬೆಳೆದು ಗಲಾಟೆಯಾಗಿತ್ತು. ಕಾರ್ತಿಕ್ ಹಾಗೂ ಆತನ ಸಹಚರ ಚೇತನ್ ಕುಮಾರ್, ಅಭಿಷೇಕ್ನ ಮೇಲೆ ಕೈ ಕಡಗದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಗಲಾಟೆ ಬಿಡಿಸಲು ಹೋದ ಅವಿನಾಶ್ ಮೇಲೆಯೂ ಹಲ್ಲೆ ನಡೆಸಿದ್ದರು’ ಎಂದು ಪೊಲೀಸರು ಹೇಳಿದರು.

‘ತೀವ್ರವಾಗಿ ಗಾಯಗೊಂಡಿದ್ದ ಅಭಿಷೇಕ್ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮೃತಪಟ್ಟಿದ್ದಾರೆ. ಅವಿನಾಶ್ ನೀಡಿದ್ದ ದೂರು ಆಧರಿಸಿ ಪೊಲೀಸರು ಕಾರ್ತಿಕ್, ಚೇತನ್ ಕುಮಾರ್ನನ್ನು ಬಂಧಿಸಿದ್ದಾರೆ’ ಎಂದು ಡಿಸಿಪಿ (ಪಶ್ಚಿಮ) ಎಸ್. ಗಿರೀಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.