ಗುರುವಾರ , ಜೂನ್ 24, 2021
28 °C

ಬೆಂಗಳೂರಿನಲ್ಲಿ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಮಾರಾಟ: ವ್ಯವಸ್ಥಾಪಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರ ನಿಗದಿಪಡಿಸಿದ ದರಕ್ಕಿಂತಲೂ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಮಾರುತ್ತಿದ್ದ ಆರೋಪದಡಿ ‘ಸಿಗಾ‌ ಗ್ಯಾಸಸ್’ ವ್ಯವಸ್ಥಾಪಕ ರವಿಕುಮಾರ್‌ನನ್ನು (36) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಗರದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಸಿಗಾ ಗ್ಯಾಸಸ್ ಘಟಕವಿದೆ. ಅಲ್ಲಿ‌ಯೇ‌ ನಿತ್ಯವೂ ದುಬಾರಿ ಬೆಲೆಗೆ ಆಮ್ಲಜನಕ ಸಿಲಿಂಡರ್ ಮಾರುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಶುಕ್ರವಾರ ರಾತ್ರಿ ದಾಳಿ ಮಾಡಲಾಯಿತು’ ಎಂದು ಸಿಸಿಬಿ‌‌ ಪೊಲೀಸರು ಹೇಳಿದರು.

‘47 ಲೀಟರ್ ಸಿಲಿಂಡರ್‌ಗೆ ₹3,000 ನಿಗದಿಪಡಿಸಲಾಗಿದೆ. ಆದರೆ, ಅದೇ ಸಿಲಿಂಡರ್‌‌ನ್ನು ₹6,000 ಮಾರಾಟ ಮಾಡಲಾಗುತ್ತಿತ್ತು. ಆರೋಪಿ ವಿರುದ್ಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ’ ಎಂದೂ ತಿಳಿಸಿದರು.

ಇದನ್ನೂ ಓದಿ... ಭಾರತದಲ್ಲಿ ಕೋವಿಡ್‌ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ: ಕಮಲಾ ಹ್ಯಾರಿಸ್

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು