ಶುಕ್ರವಾರ, ಸೆಪ್ಟೆಂಬರ್ 17, 2021
29 °C

‘ಕರ್ನಾಟಕ ಸರ್ಕಾರ’ ಫಲಕ ತೆರವುಗೊಳಿಸಿ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕರ್ನಾಟಕ ಸರ್ಕಾರ’ ಎಂಬ ಫಲಕ ಅಳವಡಿಸಿಕೊಂಡು ಸಂಚರಿಸುತ್ತಿದ್ದ ವಾಹನಗಳಿಗೆ ನಗರದ ಸಂಚಾರ ಪೊಲೀಸರು ದಂಡ ವಿಧಿಸಿದ್ದಾರೆ.

ನಗರದ ಮಾಗಡಿ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ವಾಹನಗಳ ಪರಿಶೀಲನೆ ನಡೆಸಿದರು.

‘ವಾಹನಗಳ ಮೇಲೆ ನೋಂದಣಿ ಸಂಖ್ಯೆ ಫಲಕ ಮಾತ್ರ ಅಳವಡಿಸಬೇಕು. ಉಳಿದಂತೆ ಯಾವುದೇ ಬರಹವಿರಬಾರದು. ಆದರೆ, ಕೆಲವು ವಾಹನಗಳಲ್ಲಿ ಕರ್ನಾಟಕ ಸರ್ಕಾರ ಎಂಬ ಫಲಕ ಅಳವಡಿಸಿಕೊಂಡಿದ್ದ ಬಗ್ಗೆ ದೂರುಗಳು ಬಂದಿದ್ದವು. ಹೀಗಾಗಿ, ಕಾರ್ಯಾಚರಣೆ ನಡೆಸಲಾಯಿತು’ ಎಂದು ಪೊಲೀಸರು ಹೇಳಿದರು.

‘25ಕ್ಕೂ ಹೆಚ್ಚು ವಾಹನಗಳ ಫಲಕಗಳನ್ನು ಸ್ಥಳದಲ್ಲೇ ತೆರವುಗೊಳಿಸಿ ದಂಡ ವಿಧಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು