ಗುರುವಾರ , ಅಕ್ಟೋಬರ್ 29, 2020
26 °C

ಬೆಂಗಳೂರಿನಲ್ಲಿ ಕವಿದ ಮೋಡ: ದಿನವಿಡೀ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾನುವಾರ ನಸುಕಿ ನಿಂದಲೇ ಮೋಡ ಕವಿದ ವಾತಾವರಣ ಕಾಣಿಸಿಕೊಂಡು ಮಳೆ ಸುರಿಯಿತು. ಕೆಲ ರಸ್ತೆಗಳ ಕಾಲುವೆಗಳು ಭರ್ತಿಯಾಗಿ, ರಸ್ತೆಗಳ ಮೇಲೆ ನೀರು ಹರಿಯಿತು.

ಶನಿವಾರವೂ ಸಂಜೆಯಿಂದ ತಡರಾತ್ರಿಯವರೆಗೆ ಗುಡುಗು–ಸಿಡಿಲು ಸಹಿತ ಮಳೆ ಆಗಿತ್ತು. ಮೋಡ ಕವಿದ ವಾತಾವರಣ ಮುಂದುವರಿದಿತ್ತು. ಇಡೀ ದಿನ ಬಿಸಿಲು ಕಾಣಿಸದ ವಾತಾ ವರಣ ಇತ್ತು. ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ, ಯಶವಂತಪುರ, ಪೀಣ್ಯ, ಹೆಬ್ಬಾಳ, ಮೆಜೆಸ್ಟಿಕ್, ಮಲ್ಲೇಶ್ವರ, ಶಿವಾಜಿನಗರ, ಎಂ.ಜಿ.ರಸ್ತೆ, ಅಶೋಕನಗರ, ಕೋರಮಂಗಲ, ಮಡಿವಾಳ ಸುತ್ತಮುತ್ತಲ ಸ್ಥಳಗಳಲ್ಲಿ ಮಳೆ ಜೋರಾಗಿತ್ತು. ರಜಾ ದಿನವಾಗಿದ್ದರಿಂದ ಬೆಳಿಗ್ಗೆ ವಾಹನಗಳ ಓಡಾಟ ಕಡಿಮೆ ಇತ್ತು. ಮಧ್ಯಾಹ್ನವೂ ಬಿಡುವು ಕೊಡುತ್ತಲೇ ಮಳೆ ಸುರಿದಿದ್ದರಿಂದಾಗಿ ಬಹುತೇಕ ಜನ ಹೊರಗೆ ಬರಲಿಲ್ಲ. ಬಸವೇಶ್ವರ ವೃತ್ತ, ನೃಪತುಂಗ ರಸ್ತೆ, ಕೆ.ಆರ್.ವೃತ್ತ, ಮೆಜೆಸ್ಟಿಕ್ ಹಾಗೂ ಸುತ್ತಮುತ್ತ ವಾಹನಗಳ ಸಂಚಾರ ನಿಧಾನಗತಿಯಲ್ಲಿತ್ತು. ಅಲ್ಲೆಲ್ಲ ವಾಹನಗಳ ದಟ್ಟಣೆ ಕಂಡುಬಂತು.ರೇಸ್‌ಕೋರ್ಸ್ ರಸ್ತೆ, ಶಿವಾನಂದ ವೃತ್ತ, ಓಕಳಿಪುರ, ಮಲ್ಲೇಶ್ವರ, ಕೋರಮಂಗಲ ಸೇರಿ ಕೆಲ ಭಾಗಗಳಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಪ್ರದೇಶಗಳಲ್ಲಿರುವ ರಸ್ತೆಗಳಲ್ಲಿ ನೀರು ನಿಂತಿತ್ತು.

‘ನಗರದ ಬಹುತೇಕ ಕಡೆ ಮಳೆ ಆಗಿದೆ. ರಸ್ತೆಯಲ್ಲಿ ನೀರು ಹರಿದು ವಾಹನಗಳ ಸಂಚಾರಕ್ಕೆ ಅಡ್ಡಿಯಾದ ಬಗ್ಗೆ ದೂರುಗಳು ಬಂದಿದ್ದವು. ಸ್ಥಳಕ್ಕೆ ಹೋದ ಸಿಬ್ಬಂದಿ ನೀರು ತೆರವು ಮಾಡಿದ್ದಾರೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು