ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೋದಿ ನೇತೃತ್ವದಲ್ಲಿ ದೇಶ ಸುಭದ್ರ: ಶೋಭಾ ಕರಂದ್ಲಾಜೆ

ಬಿಜೆಪಿ–ಜೆಡಿಎಸ್‌ ಚುನಾವಣಾ ಕಚೇರಿ ಉದ್ಘಾಟಿಸಿದ ಅಭ್ಯರ್ಥಿ ಶೋಭಾ ಕರಂದ್ಲಾಜೆ
Published 7 ಏಪ್ರಿಲ್ 2024, 16:19 IST
Last Updated 7 ಏಪ್ರಿಲ್ 2024, 16:19 IST
ಅಕ್ಷರ ಗಾತ್ರ

ಪೀಣ್ಯ ದಾಸರಹಳ್ಳಿ: ‘ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶದ ಭದ್ರತೆ ಹಾಗೂ ಗಡಿಗಳ ರಕ್ಷಣೆಗಾಗಿ ಮೋದಿ ದುಡಿದಿದ್ದಾರೆ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಬಾಗಲಗುಂಟೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನ ಚುನಾವಣಾ ಕಚೇರಿ ಉದ್ಘಾಟಿಸಿ, ಸಭೆಯಲ್ಲಿ ಮಾತನಾಡಿದರು.

‘ದೇಶದ ಅಭಿವೃದ್ಧಿಯಲ್ಲಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ ಇಲಾಖೆಯಲ್ಲಿ ಸುಧಾರಣೆ, ಪ್ರತಿ ಹಳ್ಳಿಗೂ ರಸ್ತೆ ನಿರ್ಮಾಣ ಮಾಡಿಸಿದ್ದಾರೆ. ಜನಸಾಮಾನ್ಯರ ಜೀವನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮನೆ, ಶೌಚಾಲಯ ನಿರ್ಮಾಣ, ವಿದ್ಯುತ್ ಸೌಲಭ್ಯ, ಆಯುಷ್ಮಾನ್ ಕಾರ್ಡ್, ಜನೌಷಧ ಕೇಂದ್ರ, ಉಜ್ವಲ ಗ್ಯಾಸ್ ರೀತಿಯ ಯೋಜನೆಗಳನ್ನು ನೀಡಿದವರು ನರೇಂದ್ರ ಮೋದಿ’ ಎಂದು ತಿಳಿಸಿದರು.

ಶಾಸಕ ಎಸ್. ಮುನಿರಾಜು ಮಾತನಾಡಿ, ‘ದೇವೇಗೌಡರ ನೆರಳಿನಲ್ಲಿ ಬೆಳೆದ ಸಿದ್ದರಾಮಯ್ಯ ಇಂದು ಅವರನ್ನೇ ಏಕವಚನದಲ್ಲಿ ಕರೆಯುತ್ತಾರೆ. ಅಂಥವರಿಗೆ ಪಾಠ ಕಲಿಸಬೇಕು’ ಎಂದು ಮನವಿ ಮಾಡಿದರು.

‘ಬಿಟ್ಟಿ ಭಾಗ್ಯಗಳಿಗಾಗಿ ₹ 1.3 ಲಕ್ಷ ಕೋಟಿ ಸಾಲ ಮಾಡಿದ್ದಾರೆ. ರಾಜ್ಯವನ್ನು ಸಾಲಗಾರರನ್ನಾಗಿ ಮಾಡಿ ಅಧೋಗತಿಗೆ ತಂದಿದ್ದಾರೆ. ಈಗ ವಿಧಾನಸಭೆಗೆ ಚುನಾವಣೆ ನಡೆದರೆ ಕಾಂಗ್ರೆಸ್‌ಗೆ 40 ಸ್ಥಾನ ಸಿಗದಂಥ ಪರಿಸ್ಥಿತಿ ಇದೆ’ ಎಂದು ಕಿಡಿಕಾರಿದರು.

ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಅಂದಾನಪ್ಪ, ದಾಸರಹಳ್ಳಿ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಎಂ. ಮುನಿಸ್ವಾಮಿ, ನೆ.ಲ. ನರೇಂದ್ರ ಬಾಬು, ನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಹರೀಶ್, ಬಿಜೆಪಿ ಮಂಡಲ ಅಧ್ಯಕ್ಷ ಸೋಮಶೇಖರ್, ಶೆಟ್ಟಿಹಳ್ಳಿ ವಾರ್ಡ್ ಅಧ್ಯಕ್ಷ ಬಿ. ಸುರೇಶ್, ಬಿಜೆಪಿ ಮುಖಂಡರಾದ ಪಿ.ಎಚ್. ರಾಜು, ಬಿ.ಎಂ. ನಾರಾಯಣ್, ಕೃಷ್ಣಮೂರ್ತಿ, ಭರತ್ ಸೌಂದರ್ಯ , ನಾಗಣ್ಣ, ಬಿ.ಟಿ. ಶ್ರೀನಿವಾಸ್, ನಿಸರ್ಗ ಕೆಂಪರಾಜು, ಪಾಂಡುರಂಗ ರಾವ್, ಟಿ. ಶಿವಕುಮಾರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT