ಬುಧವಾರ, ಜನವರಿ 29, 2020
28 °C

ಮೂರನೇ ಮಹಡಿಯಿಂದ ಬಿದ್ದು ಬಾಲಕಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐದು ವರ್ಷದ ಬಾಲಕಿಯೊಬ್ಬಳು ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಿಂದ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ದುರ್ಘಟನೆ ರಾಜರಾಜೇಶ್ವರಿ ನಗರದಲ್ಲಿ ಸೋಮವಾರ ನಡೆದಿದೆ.

ಮೃತ ಬಾಲಕಿಯನ್ನು ಪ್ರಗತಿ ಎಂದು ಗುರುತಿಸಲಾಗಿದೆ. ಶ್ರೀಧರ್‌ ಜಲೋಜಿ ಮತ್ತು ಆರತಿ ದಂಪತಿ ‍‍ಪುತ್ರಿ. ರಾಜರಾಜೇಶ್ವರಿ ದೇವಸ್ಥಾನ ಬಳಿಯ ಯೂನಿಟಿ ಅಪಾರ್ಟ್‌ಮೆಂಟ್‌ ನಿವಾಸಿ. ಬಾಲಕಿ ತನ್ನ ಎಂಟು ವರ್ಷದ ಸೋದರಿ ರಶ್ಮಿ ಜೊತೆ ಒಣಗಿ ಹಾಕಿದ್ದ ಬಟ್ಟೆ ತರಲು ತಾರಸಿಗೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಪ್ರತ್ಯಕ್ಷ ದರ್ಶಿಗಳು ತಕ್ಷಣ ಬಾಲಕಿ ತಂದೆಗೆ ವಿಷಯ ಮುಟ್ಟಿಸಿದರು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ತಾರಸಿಗೆ ಸುರಕ್ಷಿತ ಗೋಡೆಗಳನ್ನು ನಿರ್ಮಿಸಲು ಆಡಳಿತ ಮಂಡಳಿಗೆ ತಿಳಿಸಲಾಗಿತ್ತು. ಆದರೆ, ಮಂಡಳಿ ನಿರ್ಲಕ್ಷ್ಯ ತಾಳಿತು ಎಂದು ಅಪಾರ್ಟ್‌ಮೆಂಟ್‌ ನಿವಾಸಿಗಳು ದೂರಿದ್ದಾರೆ.

ರಾಜರಾಜೇಶ್ವರಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು