ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ದಸರಾ ಅಂಬಾರಿ ಹೊತ್ತಿದ್ದ ಆನೆ ಅರ್ಜುನನಿಗೆ ಎಚ್‌.ಡಿ. ಕೋಟೆಯಲ್ಲಿ ಸ್ಮಾರಕ: ಸಿಎಂ

Published : 6 ಡಿಸೆಂಬರ್ 2023, 16:16 IST
Last Updated : 6 ಡಿಸೆಂಬರ್ 2023, 16:16 IST
ಫಾಲೋ ಮಾಡಿ
Comments

ಬೆಂಗಳೂರು: ಎಂಟು ಬಾರಿ ದಸರಾ ಅಂಬಾರಿ ಹೊತ್ತಿದ್ದ ಆನೆ ‘ಅರ್ಜುನ’ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ಮಾಡಲಾಗುವುದು. ಎಚ್‌.ಡಿ. ಕೋಟೆಯಲ್ಲೂ ಸ್ಮಾರಕ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಅರ್ಜುನ ಸಾವಿಗೀಡಾಗಿರುವುದು ದುರದೃಷ್ಟಕರ. ಘಟನೆ ಬಗ್ಗೆ ಸಂಪೂರ್ಣ ತನಿಖೆ ಮಾಡುವಂತೆ ಸೂಚಿಸಲಾಗಿದೆ’ ಎಂದರು.

ಡಾಲಿ ಧನಂಜಯ್ ರಾಯಭಾರಿ:  ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ಅವರನ್ನು ಪ್ರದರ್ಶನ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಡಾಲಿ ಉಚಿತವಾಗಿ ಈ ಕೆಲಸ ಮಾಡುತ್ತಿದ್ದಾರೆ. ಚರ್ಮ ಉದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.

ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಿಐಡಿ ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
ಸಿದ್ದರಾಮಯ್ಯ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT