ದೇಶದ ಮಹಾಗ್ರಂಥ ಸಂವಿಧಾನ - ಡಿ.ಕೆ. ಶಿವಕುಮಾರ್
ಬೆಂಗಳೂರು: ‘ನಮ್ಮಲ್ಲಿ ಒಂದೊಂದು ಧರ್ಮಕ್ಕೂ ಒಂದೊಂದು ಗ್ರಂಥವಿದೆ. ಆದರೆ, ನಮ್ಮ ದೇಶದ ಮಹಾಗ್ರಂಥ ಸಂವಿಧಾನ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರ ಮದಲ್ಲಿ ಮಾತನಾಡಿದ ಅವರು, ‘ಈ ದೇಶಕ್ಕೆ ಕಾಂಗ್ರೆಸ್ ಪಕ್ಷ ಕೊಟ್ಟಿರುವ ಸಂವಿಧಾನದಲ್ಲಿ ನಮಗೆ ಹಕ್ಕು, ಧ್ವನಿ, ಅವಕಾಶ, ರಕ್ಷಣೆ ಅಡಗಿದೆ’ ಎಂದರು.
‘ಬಿಜೆಪಿ ಏಕರೂಪ ನಾಗರಿಕ ಕಾಯ್ದೆ ಕುರಿತು ಮಾತನಾಡುತ್ತಿದೆ. ಗೊಂದಲ ಸೃಷ್ಟಿಸಿ, ಜನರ ಭಾವನೆ ಕೆರಳಿಸುತ್ತಿದೆ. ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಕಾರಣಕ್ಕೆ ಅವರು ಈ ಪ್ರಯತ್ನಕ್ಕೆ ಮುಂದಾಗಿದ್ದಾರೆ’ ಎಂದು ದೂರಿದರು.
‘ಬಿಜೆಪಿಯವರು ಮತ ಕದಿಯಲು ಮುಂದಾಗಿದ್ದಾರೆ. ಸರ್ಕಾರಿ ಅಧಿಕಾರಿಗಳ ನಕಲಿ ಗುರುತಿನ ಚೀಟಿ ಮುದ್ರಣ ಮಾಡಿ ಹಂಚಿದ್ದಾರೆ. ನಾಳೆ ನಕಲಿ ಐಎಎಸ್ ಅಧಿಕಾರಿ ಎಂದು ಹೇಳಬಹುದು. ನಾವೆ ಲ್ಲರೂ ಜಾಗೃತರಾಗಬೇಕು’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.