ಬುಧವಾರ, ಆಗಸ್ಟ್ 10, 2022
23 °C

ಶಬ್ಧ ಮಾಲಿನ್ಯ: ನಿಯಮ ಜಾರಿಮಾಡದ ಅಧಿಕಾರಿಗಳ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಜಾರಿಗೊಳಿಸದ ಪೊಲೀಸ್ ಅಧಿಕಾರಿಗಳ ನಡವಳಿಕೆ ಬಗ್ಗೆ ವೈಯಕ್ತಿಕ ಪ್ರಮಾಣಪತ್ರ ಸಲ್ಲಿಸುವಂತೆ ನಗರ ಪೊಲೀಸ್ ಕಮಿಷನರ್‌ಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

‘ಈ ನಿಯಮಗಳನ್ನು ಜಾರಿಗೆ ತರುವಲ್ಲಿ ಪೊಲೀಸ್ ಅಧಿಕಾರಿಗಳು ಸತತವಾಗಿ ವಿಫಲವಾಗಿದ್ದಾರೆ. ಶಬ್ಧ ಮಾಲಿನ್ಯದ ದೂರುಗಳು ಬಂದಾಗ ನಿರ್ವಹಿಸಲು ಮಾಪಕ ಇದೆಯೇ ಎಂಬುದನ್ನು ಪರಿಶೀಲಿಸಬೇಕು. ಅವುಗಳನ್ನು ಬಳಸಲು ಪೊಲೀಸರಿಗೆ ತರಬೇತಿ ನೀಡಲಾಗಿದೆಯೇ ಎಂಬುದನ್ನು ವಿವರಿಸಬೇಕು’ ಎಂದು ಪೊಲೀಸ್ ಕಮಿಷನರ್‌ಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ತಿಳಿಸಿತು.

ನಿಯಮಗಳನ್ನು ಮರುಪರಿಶೀಲಿಸುವಂತೆ ಡಿಸಿಪಿ (ಗುಪ್ತಚರ) ಸಂತೋಷ್‌ ಬಾಬು ಸಲ್ಲಿಸಿದ್ದ ಪ್ರಮಾಣಪತ್ರ ಬಗ್ಗೆ ಆಘಾತ ವ್ಯಕ್ತಪಡಿಸಿದ ಪೀಠ, ಅಧಿಕಾರಿ ನಡೆಯನ್ನು ತರಾಟೆಗೆ ತೆಗೆದುಕೊಂಡಿತು. ಧಾರ್ಮಿಕ ಸ್ಥಳಗಳಲ್ಲಿ ನಿಯಮ ಉಲ್ಲಂಘನೆ ಕಂಡು ಬಂದರೂ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವ ಬದಲು ನಿಯಮವನ್ನೇ ಪ್ರಶ್ನೆ ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿತು. ‌

ಧಾರ್ಮಿಕ ಕೇಂದ್ರಗಳಲ್ಲಿ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ಧ್ವನಿವರ್ಧಕ ಬಳಸುತ್ತಿರುವವರ ವಿರುದ್ಧ ಕ್ರಮ ಜರುಗಿಸಲು ಆದೇಶಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್ ಅರ್ಜಿ ಸಲ್ಲಿಸಿದ್ದರು. ‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು