ಬೆಂಗಳೂರು: ‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆಯ ಕಾರಣಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಪ್ರಕರಣ ರದ್ದು ಕೋರಿ ಕೆ.ಎಸ್.ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರ ಪರ ವಕೀಲ ಎಂ. ವಿನೋದ್ ಕುಮಾರ್ ವಾದ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಇದೇ 15ಕ್ಕೆ ಮುಂದೂಡಿತು.

ಪ್ರಕರಣವೇನು?: ವಿಧಾನಸಭೆ ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶಿವಮೊಗ್ಗದ ನಿವಾಸದ ಆವರಣದಲ್ಲಿ 2023ರ ಏಪ್ರಿಲ್ 25ರಂದು ನಡೆದ ವೀರಶೈವ ಲಿಂಗಾಯತ-ಸಮುದಾಯದ ಸಭೆಯಲ್ಲಿ ಮಾತನಾಡಿದ್ದ ಈಶ್ವರಪ್ಪ, ‘ಶಿವಮೊಗ್ಗದಲ್ಲಿ 50ರಿಂದ 55 ಸಾವಿರ ಮುಸ್ಲಿಂ ಮತದಾರರು ಇದ್ದಾರೆ. ಆದರೆ, ನಮಗೆ ಒಂದೇ ಒಂದು ಮುಸ್ಲಿಂ ಮತ ಬೇಡ ಎಂದು ಹೇಳಿದ್ದಾರೆ’ ಎಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ ವರದಿಯಾಗಿತ್ತು. ಇದನ್ನು ಆಧರಿಸಿ ಮೇ 8ರಂದು ಎಫ್ಐಆರ್ ದಾಖಲಿಸಲಾಗಿತ್ತು. ಇದೇ 2ಕ್ಕೆ ಪ್ರಕರಣದ ವಿಚಾರಣೆ ನಿಗದಿಯಾಗಿತ್ತು. ಇದೀಗ ಹೈಕೋರ್ಟ್ ಇದಕ್ಕೆ ತಡೆ ನೀಡಿದೆ.

‘ಖಾಸಗಿ ಸುದ್ದಿ ಸಂಸ್ಥೆಯಾದ ಎಕ್ಸ್ (ಟ್ವಿಟರ್) ಖಾತೆಯ ಮಾಹಿತಿ ಆಧರಿಸಿ ದೂರು ದಾಖಲಿಸಲಾಗಿದೆ. ಪ್ರಕರಣದಲ್ಲಿ ಯಾವುದೇ ಸಾಕ್ಷಿ-ಪುರಾವೆಗಳಿಲ್ಲ. ಈ ತನಿಖೆಯು ಕಾನೂನಿನ ದುರ್ಬಳಕೆ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.