ಭಾನುವಾರ, ಏಪ್ರಿಲ್ 2, 2023
33 °C

277 ಕೆ.ಜಿ ಗಾಂಜಾ ಸಾಗಣೆ ಮಾಡಿದ್ದ ಆರೋಪಿಗೆ ಜಾಮೀನು ನೀಡಲು ಹೈಕೋರ್ಟ್ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾರು ಮತ್ತು ಲಾರಿಯಲ್ಲಿ ಒಟ್ಟು 277 ಕೆ.ಜಿಯಷ್ಟು ಪ್ರಮಾಣದ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ರುವ ಬಂಧಿತನಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಈ ಸಂಬಂಧ ಕೊಡಗು ಜಿಲ್ಲೆ ಕುಶಾಲನಗರದ ನಿವಾಸಿ ಸೈಯದ್ ಮೊಹಮ್ಮದ್ ಅಲಿಯಾಸ್ ನಸೀಮ್ ಎಂಬುವವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಎಚ್‌.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಜಾಮೀನು ನೀಡಲು ಈ ಪ್ರಕರಣ ಯೋಗ್ಯವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.

‘ಕಾರಿನ ಡಿಕ್ಕಿಯಲ್ಲಿ ಸಾಗಣೆ ಮಾಡುತ್ತಿದ್ದುದು ಗಾಂಜಾ ಎಂಬುದನ್ನು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿ ದೃಢಪಡಿಸಿದೆ. ಹೀಗಾಗಿ, ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ’ ಎಂದು ನ್ಯಾಯ ಪೀಠ ಹೇಳಿದೆ.

ಪ್ರಕರಣವೇನು?: ಮೊಹಮ್ಮದ್ ತೆರಳುತ್ತಿದ್ದ ಕಾರಿನಲ್ಲಿ 60 ಕೆ.ಜಿ ಮತ್ತು ಆ ಕಾರನ್ನು ಹಿಂಬಾಲಿಸಿಕೊಂಡು ಹೋಗುತ್ತಿದ್ದ ಲಾರಿಯೊಳಗೆ ಇದ್ದ 217 ಕೆ.ಜಿಯಷ್ಟು ಪ್ರಮಾಣದ ಗಾಂಜಾವನ್ನು ಮಂಗಳೂರು ನಗರದ ಆರ್ಥಿಕ‌ ಅಪರಾಧಗಳ ತನಿಖೆ ಮತ್ತು ಮಾದಕ ವಸ್ತು ಸಾಗಣೆ ನಿಗ್ರಹ ದಳದ ಪೊಲೀಸರು ವಶಪಡಿಸಿಕೊಂಡಿದ್ದರು.

ಈ‌ ಕುರಿತಂತೆ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಆರೋಪಿ ಸೈಯದ್ ಮೊಹಮ್ಮದ್ ಕಳೆದ ಒಂದು ವರ್ಷ ಏಳು ತಿಂಗಳಿನಿಂದ ಜೈಲಿನಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು