ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್‌ ವಿಚಾರಕ್ಕೆ ಗಲಾಟೆ: ತಂದೆಯಿಂದಲೇ ಮಗನ ಕೊಲೆ

Published 10 ಜೂನ್ 2024, 16:01 IST
Last Updated 10 ಜೂನ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ಬೈಕ್‌ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತಂದೆಯಿಂದ ಮಗನ ಕೊಲೆ ನಡೆದಿದೆ ಎನ್ನಲಾಗಿದ್ದು, ಅನ್ನಪೂರ್ಣೇಶ್ವರಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನ್ನಪೂರ್ಣೇಶ್ವರಿ ನಗರದ ‘ಡಿ’ ಗ್ರೂಪ್ ಲೇಔಟ್‌ನ ಮುದ್ದಿನಪಾಳ್ಯ ನಿವಾಸಿ ಅಂಜನ್ ಕುಮಾರ್ (27) ಕೊಲೆಯಾದ ವ್ಯಕ್ತಿ. ಕೃತ್ಯ ಎಸಗಿದ ಆರೋಪ ಮೇಲೆ ಅಂಜನ್‌ಕುಮಾರ್ ತಂದೆ ವೆಂಕಟೇಶ್‌ (53) ಅವರನ್ನು ಪೊಲೀಸರು ಬಂಧಿಸಿದ್ದಾರೆ.

‘ವೆಂಕಟೇಶ್‌ ಅವರು ರಿಯಲ್‌ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದರು. ಪತ್ನಿ, ಪುತ್ರ ಹಾಗೂ ಪುತ್ರಿ ಜೊತೆಗೆ ಮುದ್ದಿನಪಾಳ್ಯದಲ್ಲಿ ನೆಲೆಸಿದ್ದರು. ಪುತ್ರ ಅಂಜನ್ ಕುಮಾರ್‌ ಪಿಯುಸಿ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ. ಬೇರೆಲ್ಲೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಖಾಸಗಿ ಕಂಪನಿಯಲ್ಲಿ ಪುತ್ರಿ ಉದ್ಯೋಗದಲ್ಲಿ ಇದ್ದರು. ಭಾನುವಾರ ಸಂಜೆ ವೆಂಕಟೇಶ್ ಅವರು, ಮಗಳ ಬೈಕ್‌ ಅನ್ನು ತೆಗೆದುಕೊಂಡು ಹೊರಗೆ ಹೋಗಿದ್ದರು. ರಾತ್ರಿ ಮನೆಗೆ ಬಂದಾಗ ಬೈಕ್‌ ತಂದಿರಲಿಲ್ಲ. ಪುತ್ರ ಬೈಕ್‌ ಬಗ್ಗೆ ಪ್ರಶ್ನಿಸಿದ್ದರು. ಆಗ ಗಲಾಟೆ ನಡೆದಿದೆ’ ಎಂದು ಮೂಲಗಳು ಹೇಳಿವೆ.

‘ಬೈಕ್‌ ಬಗ್ಗೆ ಪ್ರಶ್ನಿಸಿದಾಗ ತಂದೆ ಉಡಾಫೆಯಿಂದ ಉತ್ತರಿಸಿದ್ದರು ಎನ್ನಲಾಗಿದೆ. ಬೈಕ್‌ ಎಲ್ಲೋ ನಿಲ್ಲಿಸಿದ್ದೇನೆ; ತರುತ್ತೇನೆ ಎಂದಿದ್ದರು. ಗಲಾಟೆ ವಿಕೋಪಕ್ಕೆ ಹೋದಾಗ ಅಂಜನ್‌ಕುಮಾರ್‌, ಹೆಲ್ಮೆಟ್‌ನಿಂದ ತಂದೆಯ ಮೇಲೆ ಹಲ್ಲೆ ಮಾಡಿದ್ದರು. ಇದರಿಂದ ಕೋಪಗೊಂಡ ತಂದೆ, ಅಡುಗೆ ಕೋಣೆಗೆ ತೆರಳಿ ಚಾಕು ತಂದು, ಪುತ್ರನ ಎದೆಯ ಭಾಗಕ್ಕೆ ಇರಿದಿದ್ದಾರೆ. ಅಂಜನ್ ಕುಮಾರ್ ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದು, ಮೃತಪಟ್ಟರು’ ಎಂದು ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT